JOB ALERT: ಡಿಗ್ರಿ ಪಾಸಾಗಿದ್ರೆ 45 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿರಿ

EPFO Recruitment: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಮೈಸೂರು ಮತ್ತು ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲಾಗುವುದು. ಈ ಹುದ್ದೆಗೆ ಮಾರ್ಚ್​ 7ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್​ 27 ಕೊನೆಯ ದಿನವಾಗಿರುತ್ತದೆ.

Written by - Puttaraj K Alur | Last Updated : Mar 15, 2024, 08:52 AM IST
  • ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO)ಯಲ್ಲಿ ಹುದ್ದೆಗಳ ಭರ್ತಿ
  • 323 ಆಪ್ತ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿರುತ್ತದೆ
JOB ALERT: ಡಿಗ್ರಿ ಪಾಸಾಗಿದ್ರೆ 45 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿರಿ title=
EPFO Recruitment

EPFO JOB ALERT: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO)ಯಲ್ಲಿ ಹುದ್ದೆಗಳ ಭರ್ತಿಗೆ ಕೇಂದ್ರ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಒಟ್ಟು 323 ಆಪ್ತ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಯ ವಿವರ: ಒಟ್ಟು 323 ಆಪ್ತ ಸಹಾಯಕರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 132, OBC ಅಭ್ಯರ್ಥಿಗಳಿಗೆ 87, EWS ​32, SC 24 ಮತ್ತು STಗೆ 48 ಹುದ್ದೆಗಳನ್ನು ಮೀಸಲು ಇರಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾಷೆಯಲ್ಲಿ ಸ್ಟೆನೋಗ್ರಾಫರ್​ ಆಗಿರಬೇಕು.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ 2 ರೂಪಾಯಿ ಇಳಿಸಲು ಕೇಂದ್ರ ನಿರ್ಧಾರ

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು. OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ: ಮಾಸಿಕ 44,900 ರೂ. ವೇತನ ನಿಗದಿಪಡಿಸಲಾಗಿದೆ  

ಅರ್ಜಿ ಸಲ್ಲಿಸುವುದು ಹೇಗೆ?: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. SC/ST, ಮಹಿಳಾ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಇತರ ಅಭ್ಯರ್ಥಿಗಳಿಗೆ 25 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. 

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಮೈಸೂರು ಮತ್ತು ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲಾಗುವುದು. ಈ ಹುದ್ದೆಗೆ ಮಾರ್ಚ್​ 7ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್​ 27 ಕೊನೆಯ ದಿನವಾಗಿರುತ್ತದೆ. ಹುದ್ದೆಯ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು upsconline.nic.in. ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಇದನ್ನೂ ಓದಿ: Mamata Banerjee: ಬಿದ್ದು ಹಣೆಗೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ದಾಖಲು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News