Job Alert: ಸಮುದಾಯ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನ

ಇಲ್ಲಿನ ನಗರಸಭೆ ವತಿಯಿಂದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್)ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂರು ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಸ್ವ ಸಹಾಯ ಸಂಘಗಳ/ ಒಕ್ಕೂಟದ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Nov 11, 2022, 02:03 AM IST
  • ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.
  • ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ.
  • ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನವಾಗಿದ್ದು,
Job Alert: ಸಮುದಾಯ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನ title=
file photo

ಕೊಪ್ಪಳ: ಇಲ್ಲಿನ ನಗರಸಭೆ ವತಿಯಿಂದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್)ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂರು ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಸ್ವ ಸಹಾಯ ಸಂಘಗಳ/ ಒಕ್ಕೂಟದ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : India Post Recruitment 2022 : ಅಂಚೆ ಇಲಾಖೆಯಲ್ಲಿ 188 ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿವರಗಳಿಗೆ ಇಲ್ಲಿ ಪರಿಶೀಲಿಸಿ

ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಆಯ್ಕೆ ಸಮಿತಿಯ ನಿರ್ಣಯವೇ ಅಂತಿಮವಾಗಿರುತ್ತದೆ. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನವಾಗಿದ್ದು, ನಗರಸಭೆ ಕಾರ್ಯಾಲಯದ ಡೇ-ನಲ್ಮ್ ಯೋಜನೆ ವಿಭಾಗದಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಕಾರ್ಯಾಲಯಕ್ಕೆ ಸಲ್ಲಿಸಬೇಕು.

ಇದನ್ನೂ ಓದಿ : CSL Recruitment 2022 : CSL ನಲ್ಲಿ 143 ಹುದ್ದೆಗಳಿಗೆ ಅರ್ಜಿ : ಇಲ್ಲಿದೆ ಪರಿಶೀಲಿಸಿ

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.8000/- ಗೌರವಧನ ಹಾಗೂ ರೂ.2000/- ಟಿಎ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ರಿಂದ 45 ವರ್ಷದ ವಯೋಮಿತಿ ಹೊಂದಿರಬೇಕು. ಕನಿಷ್ಠ ಪಿಯುಸಿ ಅಥವಾ ಅದಕ್ಕಿಂತ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ (ಪ್ರಮಾಣ ಪತ್ರ) ಹೊಂದಿರಬೇಕು. ಪಟ್ಟಣ ವ್ಯಾಪ್ತಿಯ ಸ್ವ-ಸಹಾಯ ಸಂಘದಲ್ಲಿ ಕನಿಷ್ಠ 3 ವರ್ಷದಿಂದ ಸದಸ್ಯೆಯಾಗಿರಬೇಕು. ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯೆಯಾಗಿರಬೇಕು. ಸ್ವ ಸಹಾಯ ಸಂಘದಲ್ಲಿ ಆಂತರಿಕ ಸಾಲ ಪಡೆದು ಸಕಾಲದಲ್ಲಿ ಮರು ಪಾವತಿ ಮಾಡಿರಬೇಕು. ಕಟ್ ಬಾಕಿದಾರರಾಗಿರಬಾರದು. ಸರ್ಕಾರಿ, ಅರೆಸರ್ಕಾರಿ, ಎನ್‌ಜಿಓ ಗಳಲ್ಲಿ ಉದ್ಯೋಗ ಹೊಂದಿರಬಾರದು. ಕರ್ತವ್ಯ ನಿಮಿತ್ಯ ಅಗತ್ಯವಿದ್ದಲ್ಲಿ ಹೊರಸಂಚಾರಕ್ಕೆ ಸಿದ್ದವಿರಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News