Job Alert: ಅಂಚೆ ಇಲಾಖೆಯ 32,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Post Office Jobs: ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 32,000 ಪೋಸ್ಟ್‌ಮನ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

Written by - Puttaraj K Alur | Last Updated : Apr 15, 2024, 09:40 PM IST
  • ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಒಟ್ಟು 32,000 ಪೋಸ್ಟ್‌ಮನ್‌ ಹುದ್ದೆಗಳ ಭರ್ತಿಗೆ ನೇಮಕಾತಿಗೆ ಅಧಿಸೂಚನೆ
  • ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ SSLC ಪಾಸಾಗಿರಬೇಕು
Job Alert: ಅಂಚೆ ಇಲಾಖೆಯ 32,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ title=
Post Office Jobs

ನವದೆಹಲಿ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 32,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪೋಸ್ಟ್‌ಮನ್‌ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.  

ಹುದ್ದೆಯ ಮಾಹಿತಿ: ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 32,000 ಪೋಸ್ಟ್‌ಮನ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿMonkhood: ಸನ್ಯಾಸಿ ಜೀವನ ನಡೆಸಲು 200 ಕೋಟಿ ರೂ ಮೌಲ್ಯದ ಸಂಪತ್ತು ದಾನ ಮಾಡಿದ ದಂಪತಿಗಳು..!

ಶೈಕ್ಷಣಿಕ ಅರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ SSLC ಪಾಸಾಗಿರಬೇಕು.  

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18ರಿಂದ ಗರಿಷ್ಠ 40 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ SC/STಗೆ 3 ವರ್ಷ ಮತ್ತು OBCಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಸಂಬಳ: ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 12-14 ಸಾವಿರ ಸಂಬಳ ನೀಡಲಾಗುತ್ತದೆ. ಇದಲ್ಲದೆ ಸರ್ಕಾರದಿಂದ ವಿವಿಧ ಸವಲತ್ತುಗಳು ಸಹ ಸಿಗುತ್ತವೆ.

ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಮಹಿಳೆಯರು, SC/ST PWD ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.

ಏನು ಕೆಲಸ..?: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಪೋಸ್ಟ್ ಆಫೀಸ್‌ನ ದೈನಂದಿನ ಕಾರ್ಯಾಚರಣೆಯಲ್ಲಿ ಕೆಲಸ ಮಾಡಬೇಕಾಗುತ್ತದೆ.

ಇದನ್ನೂ ಓದಿ: ಅಮರನಾಥ ಯಾತ್ರಾರ್ಥಿಗಳಿಗೆ ಶುಭ ಸುದ್ದಿ..! ನೋಂದಣಿ ವಿಧಾನ, ದಿನಾಂಕ, ಹೆಚ್ಚಿನ ಮಾಹಿತಿ ಇಲ್ಲಿದೆ

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆಯನ್ನು ನಡೆಸುವುದಿಲ್ಲ. ಕೇವಲ ಮೆರಿಟ್ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News