Job Alert: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬಂಪರ್‌ ಉದ್ಯೋಗ!

Kalaburagi Women and Child Development Department Job Openings:ಒಂದು ಜಿಲ್ಲಾ ಮಿಷನ್ ಕೋಆರ್ಡಿನೇಟರ್ ಹುದ್ದೆ ಮತ್ತು ಒಂದು ಸ್ಪೆಷಲಿಸ್ಟ್​ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್​) ಹುದ್ದೆ ಖಾಲಿ ಇವೆ. 

Written by - Puttaraj K Alur | Last Updated : Mar 11, 2024, 11:15 PM IST
  • ಕಲಬುರಗಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ
  • ಜಿಲ್ಲಾ ಮಿಷನ್ ಕೋಆರ್ಡಿನೇಟರ್ ಮತ್ತು ಸ್ಪೆಷಲಿಸ್ಟ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಅರ್ಜಿ ಸಲ್ಲಿಸಲು ಮಾರ್ಚ್​ 14 ಕೊನೆ ದಿನವಾಗಿದ್ದು, ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು
Job Alert: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬಂಪರ್‌ ಉದ್ಯೋಗ!   title=
Job Openings

Women and Child Development Department Kalaburagi: ಕಲಬುರಗಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 ಜಿಲ್ಲಾ ಮಿಷನ್ ಕೋಆರ್ಡಿನೇಟರ್ ಮತ್ತು ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 

ಅಭ್ಯರ್ಥಿಗಳು ಆಫ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

ಇದನ್ನೂ ಓದಿ: Lok Sabha Elections 2024: NDA 400 ಅಂಕ ತಲುಪುವುದು ಕಷ್ಟಸಾಧ್ಯ, ಪ್ರತಿಪಕ್ಷಗಳಿಗೆ ಎಷ್ಟು ಸ್ಥಾನ? ಇಲ್ಲಿದೆ ಶಾಕಿಂಗ್ ಸಮೀಕ್ಷೆ!

ಹುದ್ದೆಯ ಮಾಹಿತಿ: ಒಂದು ಜಿಲ್ಲಾ ಮಿಷನ್ ಕೋಆರ್ಡಿನೇಟರ್ ಹುದ್ದೆ ಮತ್ತು ಒಂದು ಸ್ಪೆಷಲಿಸ್ಟ್​ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್​) ಹುದ್ದೆ ಖಾಲಿ ಇವೆ. 

ಶೈಕ್ಷಣಿಕ ಅರ್ಹತೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ಕಲಬುರಗಿ

ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ, ಸ್ಕಿಲ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು. ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೈಲ್ವೆ ನಿಲ್ದಾಣ, IB ರಸ್ತೆ, ಗುರುಕುಲ ಕಾಲೇಜು ಹತ್ತಿರ, ಧಡೇಡ್ ಹೆರಿಗೆ ಆಸ್ಪತ್ರೆ ಆವರಣ, ಕಲಬುರಗಿ, ಕರ್ನಾಟಕ

ಇದನ್ನೂ ಓದಿ: CAA ಜಾರಿಗೊಳಿಸಿದ Modi Government, ಏನಿದು ಸಿಎಎ, ಇಲ್ಲಿದೆ ಅದರ ಕಂಪ್ಲೇಟ್ ಮಾಹಿತಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News