ಬೆಂಗಳೂರು : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾದ 1,75,905 ಅಭ್ಯರ್ಥಿಗಳ ಪೈಕಿ 65,233 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣ ಪ್ರಮಾಣ ಶೇ. 37.08 ರಷ್ಟಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : CT Ravi : 'ಪ್ರಾಸ ಬದ್ದವಾಗಿ ಸಿಟಿನ ಲೂಟಿ ಅನ್ನುವುದಾದರೆ ಸಿದ್ದುನ ಪೆದ್ದ ಅನ್ನಬಹುದು'
ಫಲಿತಾಂಶ ನೋಡಲು ಈ ಲಿಂಕ್ ಕ್ಲಿಕ್ ಮಾಡಿ : http://karresults.nic.in
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.
ಪರೀಕ್ಷೆಗೆ ಹಾಜರಾದ 1,75,905 ಅಭ್ಯರ್ಥಿಗಳ ಪೈಕಿ 65,233 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.
ಉತ್ತೀರ್ಣ ಪ್ರಮಾಣ ಶೇ. 37.08
ಫಲಿತಾಂಶ ನೋಡಲು: https://t.co/EyvqB5uTXn@BSBommai— B.C Nagesh (@BCNagesh_bjp) September 12, 2022
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಆಗಸ್ಟ್ 12 ರಿಂದ ಆಗಸ್ಟ್ 25, 2022 ರವರೆಗೆ ಎರಡು ಅವಧಿಗಳಲ್ಲಿ ನಡೆಸಲಾಯಿತು. ಬೆಳಗಿನ ಶಿಫ್ಟ್ 10:15 ರಿಂದ 1:30 ರ ನಡುವೆ ಮತ್ತು ಮಧ್ಯಾಹ್ನದ ಶಿಫ್ಟ್ 2:15 ರಿಂದ 5:30 ರ ನಡುವೆ ನಡೆಸಲಾಯಿತು.
ಈ ಬಾರಿ ದ್ವಿತೀಯ ಪಿಯು ಪೂರಕ ಪರೀಕ್ಷೆಯನ್ನು ಆಗಸ್ಟ್ 12 ರಿಂದ 25 ರವರೆಗೆ ನಡೆಸಲಾಗಿತ್ತು. ಅನುತ್ತೀರ್ಣರಾದ, ಇತರೆ ವರ್ಷದ ಪುನರಾವರ್ತಿತ ಹಾಗೂ ಖಾಸಗಿ ಅಭ್ಯರ್ಥಿಗಳು ಸೇರಿ ಒಟ್ಟು 1,85,270 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ರಾಜ್ಯಾದ್ಯಂತ ಒಟ್ಟು 307 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಒಟ್ಟು 678 ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.
ಇದನ್ನೂ ಓದಿ : Rohini Sindhuri : 'ರೋಹಿಣಿ ಸಿಂಧೂರಿ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.