ಇಂದೇ ಪ್ರಕಟಗೊಳ್ಳಲಿದೆ ಕೆಸಿಇಟಿ ಫಲಿತಾಂಶ 2022! ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಭೇಟಿ ನೀಡಿ

ಈಗಾಗಲೇ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಫಲಿತಾಂಶವು ಜುಲೈ 21 ರಿಂದ ಜುಲೈ 23ರ ಒಳಗಾಗಿ ಪ್ರಕಟವಾಗುತ್ತದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಕಳೆದ ದಿನದಿಂದ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ಬಂದಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ. 

Written by - Bhavishya Shetty | Last Updated : Jul 22, 2022, 11:46 AM IST
  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ, ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ
  • ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಶೀಘ್ರವೇ ಪ್ರಕಟ ಸಾಧ್ಯತೆ
  • ಅಧಿಕೃತ ವೆಬ್‌ಸೈಟ್-kea.kar.nic.in ನಲ್ಲಿ ಪರೀಕ್ಷಾ ಫಲಿತಾಂಶ ಚೆಕ್‌ ಮಾಡಿ
ಇಂದೇ ಪ್ರಕಟಗೊಳ್ಳಲಿದೆ ಕೆಸಿಇಟಿ ಫಲಿತಾಂಶ 2022! ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಭೇಟಿ ನೀಡಿ title=
KCET Result

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority- KEA) ನಡೆಸುವ, ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಕೆಸಿಇಟಿ 2022 ಫಲಿತಾಂಶ ಶೀಘ್ರವೇ ಪ್ರಕಟಗೊಳ್ಳಲಿದೆ.  ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ, ಕೆಸಿಇಟಿ ಫಲಿತಾಂಶ 2022 ರ ಫಲಿತಾಂಶಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕೆಇಎ ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಸದ್ಯಕ್ಕೆ, ಕೆಸಿಇಟಿ ಫಲಿತಾಂಶಗಳ ಘೋಷಣೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಆದರೆ ಶೀಘ್ರದಲ್ಲೇ ಅವು ಬಿಡುಗಡೆಯಾಗುವ ನಿರೀಕ್ಷೆಯಿದೆ. ಫಲಿತಾಂಶವನ್ನು ಘೋಷಿಸಿದ ನಂತರ, ವಿದ್ಯಾರ್ಥಿಗಳು ತಮ್ಮ ಕರ್ನಾಟಕ ಸಿಇಟಿ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್-kea.kar.nic.in ಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದು. 

ಇದನ್ನೂ ಓದಿ: JEE Main 2022 admit Card ಬಿಡುಗಡೆ: ಡೌನ್‌ಲೋಡ್ ಮಾಡಲು ಈ ಲಿಂಕ್ ಬಳಸಿ

ಈಗಾಗಲೇ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಫಲಿತಾಂಶವು ಜುಲೈ 21 ರಿಂದ ಜುಲೈ 23ರ ಒಳಗಾಗಿ ಪ್ರಕಟವಾಗುತ್ತದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಕಳೆದ ದಿನದಿಂದ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ಬಂದಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ. 

ಪರೀಕ್ಷೆ ಬರೆದ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ kea.kar.nic.in, ಅಥವಾ https://cetonline.karnataka.gov.in/kea/ ಮೂಲಕ ತಮ್ಮ ಫಲಿತಾಂಶವನ್ನು ನೋಡಬಹುದು. 

KCET 2022 ಫಲಿತಾಂಶವನ್ನು ಹೀಗೆ ಚೆಕ್‌ ಮಾಡಿ: 
ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ ಗೆ ಭೇಟಿ ನೀಡಿ
ಅಲ್ಲಿ ನೀಡಲಾದ ಯುಜಿಸಿಇಟಿ-2022 ಫಲಿತಾಂಶ ಲಿಂಕ್‌ನ್ನು ಕ್ಲಿಕ್‌ ಮಾಡಿ.
ನೋಂದಣಿ ಸಂಖ್ಯೆ, ಪಾಸ್‌ವರ್ಡ್‌, ಜನ್ಮ ದಿನಾಂಕಗಳಂತಹ ವಿವರಗಳನ್ನು ನಮೂದಿಸಿ 
ಲಾಗಿನ್‌ ಆದ ಬಳಿಕ ಅಲ್ಲಿ ಕೋರಲಾದ ವಿವರಗಳನ್ನು ನಮೂದಿಸಿ ಸೈನ್‌ ಇನ್‌ ಮೇಲೆ ಕ್ಲಿಕ್‌ ಮಾಡಿ
ಪರದೆಯ ಮೇಲೆ ನಿಮ್ಮ ಯುಜಿಸಿಇಟಿ-2022 ಫಲಿತಾಂಶ ಪ್ರದರ್ಶನವಾಗುತ್ತದೆ
ಫಲಿತಾಂಶ ಪ್ರತಿಯನ್ನು ಡೌನ್‌ಲೋಡ್‌ ಮಾಡಿ. ಬೇಕಾದಲ್ಲಿ ಪ್ರಿಂಟ್‌ ತೆಗೆದುಕೊಳ್ಳಬಹುದು

ಇದನ್ನೂ ಓದಿ: CBSE ಬೋರ್ಡ್ 12ನೇ ತರಗತಿ ಫಲಿತಾಂಶ: ರಿಸಲ್ಟ್‌ ಪರಿಶೀಲಿಸಲು ಈ ಮಾರ್ಗ ಅನುಸರಿಸಿ

ಈ ಬಾರಿ ಯುಜಿಸಿಇಟಿ ಪರೀಕ್ಷೆಗೆ ಒಟ್ಟು 2.11 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 2 ಲಕ್ಷ ಮಂದಿ ಮಾತ್ರ ಭಾಗವಹಿಸಿದ್ದರು ಎನ್ನಲಾಗಿದೆ. ಇನ್ನು ಇಲ್ಲಿ ಬಂದ ಫಲಿತಾಂಶಗಳ ಆಧಾರದ ಮೇಲೆ ಪರೀಕ್ಷಾ ಪ್ರಾಧಿಕಾರವು ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸುತ್ತದೆ. ಈ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ರಾಜ್ಯದ ಕಾಲೇಜುಗಳಿಗೆ ಪ್ರವೇಶವನ್ನು ಒದಗಿಸಲು ಪರಿಗಣಿಸಲಾಗುವ ಕನಿಷ್ಠ ಅಂಕಗಳು ಎಂದು ಹೇಳಲಾಗುತ್ತದೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News