KPCL Recruitment 2023: ಕರ್ನಾಟಕ ವಿದ್ಯುತ್ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

KPCL Recruitment 2023: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್( KPCL)ನಲ್ಲಿ ಖಾಲಿಯಿರುವ ಆಫೀಸ್ ಅಸಿಸ್ಟೆಂಟ್ ಮತ್ತು ಅಸಿಸ್ಟೆಂಟ್ ಟು ಹೆಡ್ ಹುದ್ದೆಗಳ ನೇಮಕಾತಿಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Puttaraj K Alur | Last Updated : Aug 21, 2023, 04:51 PM IST
  • ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಈ ನೇಮಕಾತಿಯಡಿ ಆಫೀಸ್ ಅಸಿಸ್ಟೆಂಟ್ & ಅಸಿಸ್ಟೆಂಟ್ ಟು ಹೆಡ್ ಹುದ್ದೆಗಳ ಭರ್ತಿ ಮಾಡಲಾಗುತ್ತಿದೆ
  • ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 60ರಿಂದ ಗರಿಷ್ಠ 70 ವರ್ಷದೊಳಗಿರಬೇಕು
KPCL Recruitment 2023: ಕರ್ನಾಟಕ ವಿದ್ಯುತ್ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ  title=
KPCL Recruitment 2023

ಬೆಂಗಳೂರು: ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತ (KPCL)ದಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಡಿ ಆಫೀಸ್ ಅಸಿಸ್ಟೆಂಟ್, ಅಸಿಸ್ಟೆಂಟ್ ಟು ಹೆಡ್ ಹುದ್ದೆಗಳ ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.

ಹುದ್ದೆಯ ವಿವರ: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್( KPCL)ನಲ್ಲಿ ಖಾಲಿಯಿರುವ ಆಫೀಸ್ ಅಸಿಸ್ಟೆಂಟ್ ಮತ್ತು ಅಸಿಸ್ಟೆಂಟ್ ಟು ಹೆಡ್ ಹುದ್ದೆಗಳ ನೇಮಕಾತಿಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಪ್ರೀತಿಸಿ ನಂಬಿಸಿ ವಂಚಿಸಿದ್ದಾರಂತೆ 70 ರ ಅಜ್ಜ ! ಠಾಣೆ ಮೆಟ್ಟಿಲೇರಿದ್ದಾರೆ 63 ರ ಅಜ್ಜಿ

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 60ರಿಂದ ಗರಿಷ್ಠ 70 ವರ್ಷದೊಳಗಿರಬೇಕು.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ: ಆಫೀಸ್ ಅಸಿಸ್ಟೆಂಟ್‍ಗೆ ಮಾಸಿಕ 65,000 ರೂ ವೇತನವಿದ್ದರೆ, ಅಸಿಸ್ಟೆಂಟ್ ಟು ಹೆಡ್‍ಗೆ ಮಾಸಿಕ 35,000 ರೂ. ವೇತನವಿರುತ್ತದೆ.

ಪ್ರಮುಖ ದಿನಾಂಕ: ಇ-ಮೇಲ್ ಅರ್ಜಿ ಕಳುಹಿಸಲು ಕೊನೆಯ ದಿನಾಂಕ: ಆಗಸ್ಟ್ 25 ಆಗಿರುತ್ತದೆ.

ಆಸಕ್ತರು ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: Gruha Lakshmi Scheme: ಆಗಸ್ಟ್ 30ಕ್ಕೆ 1.09 ಕೋಟಿ ಮಹಿಳೆಯರ ಖಾತೆಗೆ ಬರಲಿದ್ದಾಳೆ ‘ಗೃಹಲಕ್ಷ್ಮಿ’!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News