ಬೆಂಗಳೂರು : 2022ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ., 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಅಥವಾ ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಮಾರ್ಚ್ 31 ರೊಳಗಾಗಿ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: Bollywood Actress: ಮದುವೆ ಬಳಿಕ ಕುಟುಂಬಕ್ಕಾಗಿ ಸಿನಿರಂಗವನ್ನೇ ತ್ಯಜಿಸಿದ ನಟಿಯರು; ಈಗ ವಿದೇಶದಲ್ಲಿ ಸೆಟಲ್!
ಅರ್ಹ ವಿದ್ಯಾರ್ಥಿಗಳು ಪರಿಶಿಷ್ಟ ಜಾತಿಯ ಇಲಾಖಾ ವೆಬ್ಸೈಟ್ www.sw.kar.nic.in ನಲ್ಲಿ ಹಾಗೂ ಪರಿಶಿಷ್ಟ ವರ್ಗದ ಇಲಾಖಾ ವೆಬ್ಸೈಟ್ www.tw.kar.nic.in ನಲ್ಲಿ ಮಾ. 31 ರೊಳಗೆ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಮ್ಯಾನುವಲ್ನ ಯಾವುದೇ ಅರ್ಜಿ ಅಥವಾ ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.