ಕೆಲಸದ ಹುಡುಕಾಟದಲ್ಲಿದ್ದಿರಾ? ನಿಮಗಿದೋ ಸುವರ್ಣಾವಕಾಶ ಇಲ್ಲಿದೆ..!

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Jun 17, 2023, 07:39 PM IST
  • ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜೂನ್ 25 ಕೊನೆಯ ದಿನ
  • ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
  • ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನೇತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.
ಕೆಲಸದ ಹುಡುಕಾಟದಲ್ಲಿದ್ದಿರಾ? ನಿಮಗಿದೋ ಸುವರ್ಣಾವಕಾಶ ಇಲ್ಲಿದೆ..! title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಜುಲೈ  ತಿಂಗಳಲ್ಲಿ ಕೃಷಿ ಉದ್ಯಮಿ, ವೆಲ್ಡಿಂಗ್ & ಪ್ಯಾಬ್ರಿಕೇಶನ್, ಜೂಟ್ ಬ್ಯಾಗ್ ತಯಾರಿಕೆ, ಸೋಲಾರ್ ಟೆಕ್ನಿಷಿಯನ್ ಹಾಗೂ ಫೋಟೋಗ್ರಾಫಿ & ವಿಡಿಯೋಗ್ರಾಫಿ ತರಬೇತಿಗಳು ಆರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ.

ಇದನ್ನೂ ಓದಿ: ನಾಳೆಯಿಂದ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಚಾಲನೆ

ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜೂನ್ 25 ಕೊನೆಯ ದಿನವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್ ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನೇತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.

ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ, ದೂ.ಸಂ : 9482188780, 9483485489, 8970145354, 9980510717, ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News