SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮೊರಾರ್ಜಿ ಶಾಲೆಯ ಅಂಕಿತಾಗೆ ಮುಖ್ಯಮಂತ್ರಿ ಅಭಿನಂದನೆ

Karnataka SSLC Result 2024: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.

Written by - Yashaswini V | Last Updated : May 10, 2024, 01:05 PM IST
  • 1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು.
  • ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು.
  • ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ - ಸಿಎಂ ಸಿದ್ದರಾಮಯ್ಯ
SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಮೊರಾರ್ಜಿ ಶಾಲೆಯ ಅಂಕಿತಾಗೆ ಮುಖ್ಯಮಂತ್ರಿ ಅಭಿನಂದನೆ title=

Karnataka SSLC Result 2024: ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್‌ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು ಈ ವಸತಿ ಶಾಲೆಗಳ ಇನ್ನಷ್ಟು ಮಕ್ಕಳು ರ್ಯಾಂಕ್‌ ಪಡೆಯಬೇಕು. ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕೆಂದು ಆಶಿಸಿದರು.

ಮೈಸೂರಿನಲ್ಲಿ ಇಂದು ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah), ಅಂಕಿತಾಳ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಸ್ಥಾಪನೆಯ ಉದ್ದೇಶವೇ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕೂಡ ಗುಣಮಟ್ಟದ ಶಿಕ್ಷಣ (Quality Education) ದೊರೆಯಬೇಕು ಎಂಬುದಾಗಿದೆ ಎಂದು ತಿಳಿಸಿದರು. 

ಇದನ್ನೂ ಓದಿ- ಎಸ್‌ಎಸ್‌ಎಲ್‌ಸಿ ಫಲಿತಾಂಶ: ಗಡಿಜಿಲ್ಲೆ ಟಾಪ್ 10 ರಲ್ಲಿ ಸರ್ಕಾರಿ ಶಾಲೆಯ 8 ವಿದ್ಯಾರ್ಥಿಗಳು‌

1994 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ  ಹೆಂಡದಂಗಡಿ, ಸಾರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು ಎಂಬುದು ದಲಿತ ಹೋರಾಟದ, ದಲಿತ ಸಂಘರ್ಷ ಸಮಿತಿಯವರ ಘೋಷಣೆಯಾಗಿತ್ತು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಮತ್ತು ನಾನು ಕೂಡ ಗ್ರಾಮೀಣ ಪ್ರದೇಶದಿಂದ ಬಂದವನಾದ್ದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು (Morarji Desai Residential School) ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.

ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ (SSLC Exam) ಮೈಸೂರು ಜಿಲ್ಲೆ ಏಳನೇ ಸ್ಥಾನ ಪಡೆದಿದೆ. ಈ ಬಾರಿ ಐದರೊಳಗೆ ಬರಬೇಕು ಎಂದು ಸೂಚಿಸಿದ್ದೆ. ಏಳನೇ ಸ್ಥಾನ ಪಡೆದಿದೆ. ಮುಂದಿನ ಬಾರಿ ಈ ಗುರಿ ಸಾಧಿಸುವಂತೆ ತಿಳಿಸಲಾಗುವುದು ಎಂದರು.

ಇದನ್ನೂ ಓದಿ- Sarkari Naukri 2024: 10-12ನೇ ತರಗತಿ ಉತ್ತೀರ್ಣರಾದವರಿಗೆ ಸರ್ಕಾರದ ಈ ಇಲಾಖೆಯಲ್ಲಿ ನೇರ ನೇಮಕಾತಿ ಅವಕಾಶ

ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗುವುದಿಲ್ಲ. ಈ ಕಾರಣಕ್ಕೆ ಬಸವಣ್ಣನವರ ಮೂರ್ತಿಗೆ ಹಾರ ಹಾಕಿ, ಅವರನ್ನು ಸ್ಮರಿಸುತ್ತಾ, ಅವರ ವಿಚಾರಗಳನ್ನು ಸ್ಮರಿಸಿ, ಆ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News