Job Alert: ತಿಂಗಳಿಗೆ 42 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ

NIMHANS Recruitment 2024: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ಲಿನಿಕಲ್ ಸೈಕಾಲಜಿಯಲ್ಲಿ ಎಂ.ಎಸ್ಸಿ, ಎಂ.ಫಿಲ್​ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Apr 6, 2024, 12:01 PM IST
  • ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ನೇಮಕಾತಿ
  • ಸೀನಿಯರ್ ರಿಸರ್ಚ್​ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
  • ಏಪ್ರಿಲ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಿ
Job Alert: ತಿಂಗಳಿಗೆ 42 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ title=
NIMHANS Recruitment 2024

NIMHANS Recruitment 2024: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ (SRF) ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಶೈಕ್ಷಣಿಕ ಅರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ಲಿನಿಕಲ್ ಸೈಕಾಲಜಿಯಲ್ಲಿ ಎಂ.ಎಸ್ಸಿ, ಎಂ.ಫಿಲ್​ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: Daily GK Quiz: ಸೌರವ್ಯೂಹದ ಯಾವ ಗ್ರಹವನ್ನು "ಬ್ಲೂ ಪ್ಲಾನೆಟ್" ಎಂದು ಕರೆಯಲಾಗುತ್ತದೆ?

ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ಬೆಂಗಳೂರು

ವೇತನ: ಮಾಸಿಕ ₹42,000

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ docravi20@yahoo.comಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ NIMHANSನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಇದನ್ನೂ ಓದಿ: H5N1 Bird Flu: ಮತ್ತೆ ಕೋವಿಡ್ ತರಹದ ವಿನಾಶ? ಹಕ್ಕಿ ಜ್ವರ 100 ಪಟ್ಟು ಹೆಚ್ಚು ಅಪಾಯಕಾರಿ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News