National Youth Day 2024: ಯುವಕರು ದೇಶದ ಭವಿಷ್ಯ. ಹಾಗಾಗಿ, ಯುವಕರನ್ನು ಸ್ವಾವಲಂಬಿಗಳನ್ನಾಗಿಸಲು ಮತ್ತು ಸಬಲರನ್ನಾಗಿಸಲು ಭಾರತ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿ ವರ್ಷ ಜನವರಿ 12 ರಂದು "ರಾಷ್ಟ್ರೀಯ ಯುವ ದಿನ"ವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಯುವರನ್ನು ಸಶಕ್ತರನ್ನಾಗಿ ಮತ್ತು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಜಾರಿಗೊಳಿಸುರುವ ಒಂದು ಪ್ರಮುಖ ಯೋಜನೆಯ ಬಗ್ಗೆ ತಿಳಿಯೋಣ. ಅದುವೇ ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY).
ಏನಿದು ಪ್ರಧಾನ ಮಂತ್ರಿ ಮುದ್ರಾ ಯೋಜನೆ?
ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY)ಯಡಿಯಲ್ಲಿ ನಿರುದ್ಯೋಗಿಗಳು ಮತ್ತು ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಬಯಸುವ ಯುವಕರು ಅಥವಾ ತಮ್ಮ ವ್ಯಾಪಾರವನ್ನು ವಿಸ್ತರಿಸಲು ಬಯಸುವವರಿಗೆ ಸರ್ಕಾರದ ವತಿಯಿಂದ ಹಣಕಾಸಿನ ಸೌಲಭ್ಯ ಸಿಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2015 ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿದರು.
ಹೌದು, ನೀವು ಗೃಹ ಸಾಲ, ಚಿನ್ನದ ಸಾಲ ಅಥವಾ ವಾಹನ ಸಾಲಗಳನ್ನು ತೆಗೆದುಕೊಳ್ಳುವಾಗ, ನಿಮ್ಮ ಯಾವುದೇ ಆಸ್ತಿಯನ್ನು ನೀವು ಭದ್ರತೆಯಾಗಿ/ಆಧಾರವಾಗಿ ಬ್ಯಾಂಕ್‌ನಲ್ಲಿ ಅಡಮಾನವಿಡಬೇಕಾಗುತ್ತದೆ. ಆದರೆ ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯ ಉತ್ತಮ ವಿಷಯವೆಂದರೆ ಈ ಯೋಜನೆಯಲ್ಲಿ ಯಾವುದೇ ಆಧಾರವಿಲ್ಲದೆ, ಕಾರ್ಪೊರೇಟ್ ಮತ್ತು ಕೃಷಿಯೇತರ ಉದ್ದೇಶಗಳಿಗಾಗಿ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ.
ಇದನ್ನೂ ಓದಿ- ಆತ್ಮ ಯೋಜನೆ: ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ
ಮೂರು ವಿಭಾಗಗಳಲ್ಲಿ ಸಿಗಲಿದೆ ಸಾಲ ಸೌಲಭ್ಯ:
ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಮೂಲಕ ಸಾಲವನ್ನು ಪಡೆಯಲು ಬಯಸಿದರೆ, ನೀವು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್, ಸಣ್ಣ ಹಣಕಾಸು ಬ್ಯಾಂಕ್, ನಾನ್-ಫೈನಾನ್ಶಿಯಲ್ ಕಂಪನಿಯಂತಹ ಯಾವುದೇ ಸರ್ಕಾರಿ-ಖಾಸಗಿ ಬ್ಯಾಂಕ್‌ಗಳಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು.
ಈ ಯೋಜನೆಯಡಿ ವರ್ಗದ ಪ್ರಕಾರ ಸಾಲದ ಮೊತ್ತದ ಮಿತಿಯನ್ನು ನಿಗದಿಪಡಿಸಲಾಗಿದೆ.
ಅವುಗಳೆಂದರೆ:-
>> ಶಿಶು ಸಾಲ- ಇದರಲ್ಲಿ 50 ಸಾವಿರ ರೂ.ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.
>> ಕಿಶೋರ್ ಸಾಲ- ಇದರಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುತ್ತದೆ.
>> ತರುಣ್ ಸಾಲ- ಇದರಲ್ಲಿ 10 ಲಕ್ಷ ರೂ.ವರೆಗಿನ ಮೊತ್ತವನ್ನು ಸಾಲವಾಗಿ ನೀಡಲಾಗುತ್ತದೆ.
ಇದನ್ನೂ ಓದಿ- KSET 2023 Admit Card: KSET 2023 ಅಡ್ಮಿಟ್ ಕಾರ್ಡ್ ಬಿಡುಗಡೆ: ಇಲ್ಲಿದೆ ಡೌನ್‌ಲೋಡ್ ಲಿಂಕ್
ಪ್ರಧಾನ ಮಂತ್ರಿ ಮುದ್ರಾ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ:
ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಬಯಸುವ ಯಾವುದೇ ವ್ಯಕ್ತಿ ಈ ಯೋಜನೆಯಡಿ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು. ಅದೇ ಸಮಯದಲ್ಲಿ, ನಿಮ್ಮ ಅಸ್ತಿತ್ವದಲ್ಲಿರುವ ವ್ಯಾಪಾರವನ್ನು ಮುಂದಕ್ಕೆ ಕೊಂಡೊಯ್ಯಲು ನೀವು ಬಯಸಿದರೆ, ನೀವು ಅದಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ ಇದಕ್ಕಾಗಿ ಕೆಲವು ಪ್ರಮುಖ ಷರತ್ತುಗಳನ್ನು ಪೂರೈಸಬೇಕಾಗಿದೆ.
ಮುದ್ರಾ ಯೋಜನೆಗೆ ಅರ್ಜಿ ಸಲ್ಲಿಸಲು ಈ ಷರತ್ತುಗಳನ್ನು ಪೂರೈಸಬೇಕಾಗುತ್ತದೆ:-
* ಸಾಲಕ್ಕೆ ಅರ್ಜಿ ಸಲ್ಲಿಸುವ ವ್ಯಕ್ತಿ ಭಾರತದ ಪ್ರಜೆಯಾಗಿರಬೇಕು.
* ಅರ್ಜಿ ಸಲ್ಲಿಸುವ ವ್ಯಕ್ತಿಯು ಯಾವುದೇ ಬ್ಯಾಂಕ್ ಡೀಫಾಲ್ಟ್ ಇತಿಹಾಸವನ್ನು ಹೊಂದಿರಬಾರದು.
* ಮುದ್ರಾ ಸಾಲವನ್ನು ತೆಗೆದುಕೊಳ್ಳುವ ಯಾವುದೇ ವ್ಯವಹಾರವು ಕಾರ್ಪೊರೇಟ್ ಸಂಸ್ಥೆಯಾಗಿರಬಾರದು.
* ಸಾಲಕ್ಕೆ ಅರ್ಜಿ ಸಲ್ಲಿಸುವ ವ್ಯಕ್ತಿಯು ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.
* ಸಾಲಕ್ಕೆ ಅರ್ಜಿ ಸಲ್ಲಿಸುವ ವ್ಯಕ್ತಿಯ ವಯಸ್ಸು 18 ವರ್ಷಕ್ಕಿಂತ ಹೆಚ್ಚಿರಬೇಕು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.