Job Alert: ‘ಸಹಕಾರ ಬ್ಯಾಂಕ್’ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

Raddi Bank Recruitment 2023: ನೇಮಕಾತಿ ಪ್ರಕ್ರಿಯೆಯು ಕಿರಿಯ ಸಹಾಯಕ ಹುದ್ದೆಗಳಿಗೆ ಮಾತ್ರ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನವನ್ನು ಒಳಗೊಂಡಿರುತ್ತದೆ. ಸೇವಕ/ಜವಾನ ಹುದ್ದೆಗಳಿಗೆ ಕೇವಲ ಮೌಖಿಕ ಸಂದರ್ಶನವಿರುತ್ತದೆ.

Written by - Puttaraj K Alur | Last Updated : Jul 29, 2023, 04:37 PM IST
  • ಧಾರವಾಡದ ರೆಡ್ಡಿ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ
  • ಸಹಾಯಕ, ಸೇವಕ & ಜವಾನ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 22ರೊಳಗೆ ಅರ್ಜಿ ಸಲ್ಲಿಸಬಹುದು
Job Alert: ‘ಸಹಕಾರ ಬ್ಯಾಂಕ್’ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ   title=
ವಿವಿಧ ಹುದ್ದೆಗಳ ನೇಮಕಾತಿ

ಧಾರವಾಡ: ಧಾರವಾಡ ಜಿಲ್ಲೆಯ ರೆಡ್ಡಿ ಸಹಕಾರ ಬ್ಯಾಂಕ್ ನಿಯಮಿತ(THE RADDI SAHAKARA BANK NIYAMITHA)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಿರಿಯ ಸಹಾಯಕ, ಸೇವಕ, ಜವಾನ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ ಇಂತಿದೆ: 24 ಕಿರಿಯ ಸಹಾಯಕ ಮತ್ತು 10 ಸೇವಕ/ಜವಾನ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗೆ ಆಕರ್ಷಕ ವೇತನ ನೀಡಲಾಗುವುದು. ಕಿರಿಯ ಸಹಾಯಕರಿಗೆ ಮಾಸಿಕ 17,650 ರೂ.ನಿಂದ 32 ಸಾವಿರ ರೂ. ಮತ್ತು ಸೇವಕ/ಜವಾನ ಹುದ್ದೆಗೆ ಮಾಸಿಕ 12,500 ರೂ.ನಿಂದ 24 ಸಾವಿರ ರೂ. ವೇತನ ನೀಡಲಾಗುತ್ತದೆ.

ಇದನ್ನೂ ಓದಿ: ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಅರ್ಜಿ

ವಿದ್ಯಾರ್ಹತೆ: ಕಿರಿಯ ಸಹಾಯಕ ಹುದ್ದಗೆ ಕರ್ನಾಟಕ ರಾಜ್ಯ ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ, ತತ್ಸಮಾನ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಅಲ್ಲದೇ ಹೈಯರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಡಿಪ್ಲೋಮಾ ಇನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್ಮೆಂಟ್ ಸೇರಿದಂತೆ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸೇವಕ/ಜವಾನ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಕಿರಿಯ ಸಹಾಯಕರು, ಸೇವಕ, ಜವಾನ ಹುದ್ದೆಗಳಿಗೆ ದಿನಾಂಕ 2022ರ ನವೆಂಬರ್ 5ಕ್ಕೆ ರಾಜ್ಯ ಸರ್ಕಾರದ ನಿಯಮಾವಳಿಗಳ ಅನ್ವಯ ಕನಿಷ್ಠ ಮತ್ತು ಗರಿಷ್ಠ ವಯೋಮಿತಿ ಹೊಂದಿರಬೇಕು. SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ (ಪ್ರವರ್ಗ-2A/ 2B/ 3A & 3B) ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಕಿರಿಯ ಸಹಾಯಕ ಹದ್ದೆಗೆ GST ಸೇರಿ 1180 ರೂ., ಸೇವಕ/ಜವಾನ ಹುದ್ದೆಗೆ GST ಸೇರಿ 590 ರೂ. ಅರ್ಜಿ ಶುಲ್ಕವನ್ನು ಆನ್‍ಲೈನ್‍ ಮೂಲಕ ಪಾವತಿಸಬೇಕು.   

ಲಿಖಿತ ಪರೀಕ್ಷೆ ಹಾಗೂ ಸಂದರ್ಶನ: ನೇಮಕಾತಿ ಪ್ರಕ್ರಿಯೆಯು ಕಿರಿಯ ಸಹಾಯಕ ಹುದ್ದೆಗಳಿಗೆ ಮಾತ್ರ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನವನ್ನು ಒಳಗೊಂಡಿರುತ್ತದೆ. ಸೇವಕ/ಜವಾನ ಹುದ್ದೆಗಳಿಗೆ ಕೇವಲ ಮೌಖಿಕ ಸಂದರ್ಶನವಿರುತ್ತದೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಭ್ಯರ್ಥಿಗಳು www.rddibank.com ವೆಬ್‍ಸೈಟ್‍ಗೆ ಭೇಟಿ ನೀಡಿ ಆಗಸ್ಟ್ 22ರೊಳಗೆ ಅರ್ಜಿ ಸಲ್ಲಿಸಬಹುದು. ಶುಲ್ಕವನ್ನು ಪಾವತಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಡೆಬಿಟ್/ಕ್ರೆಡಿಟ್/ಆನ್ಲೈನ್ ಮೂಲಕ ನಿಗದಿತ ಶುಲ್ಕ + ಸೇವಾಶುಲ್ಕ ಪ್ರತ್ಯೇಕ ಪಾವತಿ ಮಾಡತಕ್ಕದ್ದು. ನಿಗದಿತ ಕೊನೆಯ ದಿನಾಂಕದ ನಂತರ ಪಾವತಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 0836-2796215, 2448118ಗೆ ಕರೆ ಮಾಡಿ ವಿಚಾರಿಸಬಹುದು.

ಇದನ್ನೂ ಓದಿ: International Tiger Day 2023: ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ 435ಕ್ಕೆ ಏರಿಕೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News