RITES Recruitment 2023: ಸಹಾಯಕ ಇಂಜಿನಿಯರ್ ಸೇರಿ ಹಲವು ಹುದ್ದೆಗಳು ಖಾಲಿ, 2 ಲಕ್ಷಕ್ಕೂ ಹೆಚ್ಚು ವೇತನ!

​RITES Recruitment 2023: ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವೀಸಸ್‌ನಲ್ಲಿ ಸಹಾಯಕ ಇಂಜಿನಿಯರ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ತಕ್ಷಣ ಅರ್ಜಿ ಸಲ್ಲಿಸಬೇಕು. 

Written by - Chetana Devarmani | Last Updated : Jun 27, 2023, 01:16 PM IST
  • RITES ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಸಹಾಯಕ ಇಂಜಿನಿಯರ್ ಸೇರಿ ಹಲವು ಹುದ್ದೆಗಳು ಖಾಲಿ
  • ವಾಕ್-ಇನ್-ಇಂಟರ್‌ವ್ಯೂ ಮೂಲಕ ಆಯ್ಕೆ
RITES Recruitment 2023: ಸಹಾಯಕ ಇಂಜಿನಿಯರ್ ಸೇರಿ ಹಲವು ಹುದ್ದೆಗಳು ಖಾಲಿ, 2 ಲಕ್ಷಕ್ಕೂ ಹೆಚ್ಚು ವೇತನ!   title=
RITES Recruitment 2023

​RITES Recruitment 2023: RITES (Rail India Technical and Economic Service) ನಲ್ಲಿ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ತಕ್ಷಣ ಅರ್ಜಿ ಸಲ್ಲಿಸಬೇಕು. ಸಹಾಯಕ ಇಂಜಿನಿಯರ್ ಸೇರಿದಂತೆ ಹಲವು ಹುದ್ದೆಗಳು ಖಾಲಿ ಇದ್ದು, ವೇತನ 2 ಲಕ್ಷಕ್ಕೂ ಹೆಚ್ಚು ಇರುತ್ತದೆ.

ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವೀಸಸ್‌ನಿಂದ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅದರ ಪ್ರಕಾರ ಸಂಸ್ಥೆಯಲ್ಲಿ ಹಲವು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 

ಅಧಿಕೃತ https://www.rites.com/Career ಗೆ ಭೇಟಿ ನೀಡುವ ಮೂಲಕ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05 ಜುಲೈ 2023 ಎಂದು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: PUC ಬಳಿಕ ಈ ಕೋರ್ಸ್‌ ಮಾಡಿ, ಸಾಕಷ್ಟು ಬೇಡಿಕೆ ಜೊತೆ ಲಕ್ಷಾಂತರ ರೂ. ಆದಾಯ!

ಖಾಲಿಯಿರುವ ಹುದ್ದೆಗಳು:

ಒಟ್ಟು 13 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರಲ್ಲಿ ರೆಸಿಡೆಂಟ್ ಇಂಜಿನಿಯರ್, ಅಸಿಸ್ಟೆಂಟ್ ರೆಸಿಡೆಂಟ್ ಇಂಜಿನಿಯರ್ ಇತ್ಯಾದಿ ಹುದ್ದೆಗಳು ಸೇರಿವೆ.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ: 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಇಂಜಿನಿಯರಿಂಗ್ ಪದವಿ/ಸಿವಿಲ್/ಎಲೆಕ್ಟ್ರಿಕಲ್ ಇತ್ಯಾದಿಗಳಲ್ಲಿ ಡಿಪ್ಲೊಮಾ ಮತ್ತು ಇತರ ನಿಗದಿತ ಅರ್ಹತೆಗಳು ಮತ್ತು ಕೆಲಸದ ಅನುಭವವನ್ನು ಹೊಂದಿರಬೇಕು. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು ಹುದ್ದೆಗೆ ಅನುಗುಣವಾಗಿ 40/50 ವರ್ಷಗಳಿಗೆ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ ಮತ್ತು ವೇತನ : 

ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ವಾಕ್-ಇನ್-ಇಂಟರ್‌ವ್ಯೂಗೆ ಕರೆಯಲಾಗುವುದು. ಹುದ್ದೆಗೆ ಅನುಗುಣವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000 ರೂ.ನಿಂದ 2,20,000 ರೂ. ವರೆಗೆ ಸಂಬಳ ನೀಡಲಾಗುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 600 ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಶೀಘ್ರದಲ್ಲೇ NEET UG 2023 ಕೌನ್ಸೆಲಿಂಗ್, ಅಗತ್ಯವಿರುವ ದಾಖಲೆಗಳ ಪಟ್ಟಿ‌ ಇಲ್ಲಿದೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News