Railway Recruitment 2024: ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿ

Railway Recruitment 2024: ಆಗ್ನೇಯ ಮಧ್ಯ ರೈಲ್ವೆ ನೇಮಕಾತಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Mar 29, 2024, 08:29 PM IST
  • ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಒಟ್ಟು 733 ಟ್ರೇಡ್ ಅಪ್ರೆಂಟಿಸ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು
  • ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ & ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ
Railway Recruitment 2024: ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿರಿ title=
Railway Recruitment 2024

Railway Recruitment 2024: ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 733 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 12ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಹುದ್ದೆಯ ಮಾಹಿತಿ: ಕಾರ್ಪೆಂಟರ್- 38, COPA- 100, ಡ್ರಾಫ್ಟ್ಸ್​ಮ್ಯಾನ್- 10, ಎಲೆಕ್ಟ್ರಿಷಿಯನ್- 137, ಎಲೆಕ್ಟ್ರಿಷಿಯನ್​ (ಮೆಕ್ಯಾನಿಕ್)- 5, ಫಿಟ್ಟರ್- 187, ಮೆಷಿನಿಸ್ಟ್​- 4, ಪೈಂಟರ್- 42, ಪ್ಲಂಬರ್- 25, ಮೆಕ್ಯಾನಿಕ್(RAC)- 15, SMW- 4, ಸ್ಟೆನೊ(ಇಂಗ್ಲಿಷ್)- 27, ಸ್ಟೆನೊ (ಹಿಂದಿ)- 19, ಡೀಸೆಲ್ ಮೆಕ್ಯಾನಿಕ್- 12, ಟರ್ನರ್- 4, ವೆಲ್ಡರ್- 4, ವೈರ್​​ಮ್ಯಾನ್​- 80, ಕಾಮಿಕಲ್ ಲ್ಯಾಬೊರೇಟರಿ ಅಸಿಸ್ಟೆಂಟ್- 4 ಮತ್ತು ಡಿಜಿಟಲ್ ಫೋಟೋಗ್ರಾಫರ್ ಹುದ್ದೆಗಳು ಖಾಲಿ ಇವೆ.

ಇದನ್ನೂ ಓದಿ: ಪ್ರಶಾಂತ್​ ಸಂಬರ್ಗಿಗೆ ಜೀವ ಬೆದರಿಕೆ ಸಂದೇಶ..! ಎಫ್​ಐಆರ್​ ದಾಖಲು

ವಿದ್ಯಾರ್ಹತೆ: ಆಗ್ನೇಯ ಮಧ್ಯ ರೈಲ್ವೆ ನೇಮಕಾತಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 12, 2024ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ಛತ್ತೀಸ್​ಗಢದ ಬಿಲಸ್ಪುರ

ವೇತನ: ಅರ್ಹತೆಗೆ ಅನುಗುಣವಾಗಿ ವೇತನ ನೀಡಲಾಗುತ್ತದೆ

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಶಾರ್ಟ್​ಲಿಸ್ಟಿಂಗ್, ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. 

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇರವಾಗಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ಗೆ https://www.apprenticeshipindia.gov.in/Apply ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

ಇದನ್ನೂ ಓದಿPost Office Scheme: ತೆರಿಗೆ ಮುಕ್ತ ಎಫ್ಡಿಗಿಂತ ಉತ್ತಮ ಬಡ್ಡಿ ಕೊಡುತ್ತೇ ಈ ಅಂಚೆ ಕಚೇರಿ ಯೋಜನೆ, ಮಕ್ಕಳ ಹೆಸರಿನಲ್ಲೂ ಖಾತೆ ತೆರೆಯಬಹುದು 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
 

Trending News