ಭಾರತೀಯ ಸೇನೆಯಲ್ಲಿ ನರ್ಸಿಂಗ್ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟ

Recruitment In Indian Army: ಭಾರತೀಯ ಸೇನೆಯಲ್ಲಿ ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಸಹಾಯಕ ಹುದ್ದೆಗಳಿಗೆ ಬಂಪರ್ ನೇಮಕಾತಿ ಪ್ರಕಟಗೊಂಡಿದೆ. ಭಾರತೀಯ ಸೇನೆಯು ವಲಯವಾರು ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಕುರಿತಂತೆ ಇಲ್ಲಿದೆ ಸಂಪೂರ್ಣ ಮಾಹಿತಿ. 

Written by - Yashaswini V | Last Updated : Feb 20, 2024, 08:12 AM IST
  • ಭಾರತೀಯ ಸೇನೆಯಲ್ಲಿ ಬಂಪರ್ ನೇಮಕಾತಿ
  • ಭಾರತೀಯ ಸೇನೆಯು ಇಲ್ಲಿಯವರೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ 12 ವಲಯ ನೇಮಕಾತಿ ಕಚೇರಿಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ
ಭಾರತೀಯ ಸೇನೆಯಲ್ಲಿ ನರ್ಸಿಂಗ್ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟ  title=

Recruitment In Indian Army: ಭಾರತೀಯ ಸೇನೆಯಲ್ಲಿ ನರ್ಸಿಂಗ್ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟವಾಗಿದ್ದು ವಲಯವಾರು ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈಗಾಗಲೇ ಈ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 

ಭಾರತೀಯ ಸೇನೆಯು ಇಲ್ಲಿಯವರೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ 12 ವಲಯ ನೇಮಕಾತಿ ಕಚೇರಿಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ - join Indianarmy.nic.in. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ನೇಮಕಾತಿಗೆ ಸಂಬಂಧಿಸಿದ ಮಾಹಿತಿಯನ್ನು ಕೂಲಂಕುಷವಾಗಿ ಓದುವುದು ಅಗತ್ಯವಾಗಿದೆ. 

ವಿದ್ಯಾರ್ಹತೆ: 
ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ವಿಜ್ಞಾನ ಸ್ಟ್ರೀಮ್‌ನೊಂದಿಗೆ 12 ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಿಜ್ಞಾನ ವಿಭಾಗದಲ್ಲಿ, ಅವರು ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಇಂಗ್ಲಿಷ್ ವಿಷಯಗಳನ್ನು  ಓದಿರಬೇಕು ಮತ್ತು ಪ್ರತಿ ವಿಷಯದಲ್ಲಿ ಕನಿಷ್ಠ 40% ಅಂಕಗಳನ್ನು ಗಳಿಸಿರಬೇಕು. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ. 

ಇದನ್ನೂ ಓದಿ- Latest Railway Vacancies: ರೈಲ್ವೇ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಗುಡ್ ನ್ಯೂಸ್!

ಅಪ್ಲಿಕೇಶನ್ ಪ್ರಕ್ರಿಯೆ: 
ಅಪ್ಲಿಕೇಶನ್ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್ ಪ್ರಕ್ರಿಯೆ ಆಗಿರಲಿದೆ.  

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 
ನೀವು ಭಾರತೀಯ ಸೇನೆಯ ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ  22 ಮಾರ್ಚ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 

ಅರ್ಜಿ ಶುಲ್ಕ: 
ಸಾಮಾನ್ಯ/ಒಬಿಸಿ, ಎಸ್‌ಸಿ/ಎಸ್‌ಟಿ ವರ್ಗದವರಿಗೆ ಅರ್ಜಿ ಶುಲ್ಕ 250 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೋಡ್ ಮೂಲಕ ಮಾತ್ರ ಪಾವತಿಸಬೇಕು. 

ವಯೋಮಿತಿ: 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸಿನ ಮಿತಿ 17.5 ವರ್ಷಗಳು ಮತ್ತು ಗರಿಷ್ಠ ವಯಸ್ಸು 23 ವರ್ಷಗಳು.

ಇದನ್ನೂ ಓದಿ- ನಿಮ್ಮ ರೆಸ್ಯೂಮ್‌ನ ಮಾದರಿಯಿಂದಲೂ ಸಿಗುತ್ತೆ ಉತ್ತಮ ಜಾಬ್

ಆಯ್ಕೆ ವಿಧಾನ: 
ಭಾರತೀಯ ಸೇನೆಯಲ್ಲಿ ನರ್ಸಿಂಗ್ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ, ದೈಹಿಕ ಗುಣಮಟ್ಟದ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News