RPF SI & Constable Recruitment 2024: ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ನಲ್ಲಿ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ರೈಲ್ವೆ ನೇಮಕಾತಿ ಮಂಡಳಿಯು ಅಧಿಸೂಚನೆ ಹೊರಡಿಸಿದೆ.
ಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್ಸ್ಟೇಬಲ್ ಮತ್ತು 452 ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿಯಿವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 15ರಿಂದಲೇ ಅಪ್ಲಿಕೇಶನ್ ಲಿಂಕ್ಅನ್ನು ಸಕ್ರಿಯಗೊಳಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನವಾಗಿರುತ್ತದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: Rain Alert: ಈ ವರ್ಷ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ನಿರೀಕ್ಷೆ!
ವಿದ್ಯಾರ್ಹತೆ: RPF ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅದೇ ರೀತಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ವಯೋಮಿತಿ: RPFನ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 28 ವರ್ಷ, SI ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸನ್ನು 20 ರಿಂದ 28 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ..?
- ನೀವು ಮೊದಲು rpfindianrailways.gov.in ವೆಬ್ಸೈಟ್ಗೆ ಭೇಟಿ ನೀಡಿ.
- ಮುಖಪುಟಕ್ಕೆ ಹೋಗಿ ಮತ್ತು RPF ಕಾನ್ಸ್ಟೇಬಲ್ ಮತ್ತು SI ನೇಮಕಾತಿ 2024ರ ಲಿಂಕ್ ಕ್ಲಿಕ್ ಮಾಡಿ.
- ಇಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ, ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ SMS ಮೂಲಕ ನಿಮ್ಮ ಮೊಬೈಲ್ಗೆ ಬರುತ್ತದೆ.
- ನಂತರ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು.
- ಬಳಿಕ ಅಗತ್ಯ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಮತ್ತು ಅಪ್ಲೋಡ್ ಮಾಡಬೇಕು.
- ಈಗ ಅರ್ಜಿ ಶುಲ್ಕ ಪಾವತಿಸಿ ಮತ್ತು Submit ಕ್ಲಿಕ್ ಮಾಡಬೇಕು.
- ನಂತರ ನಿಮ್ಮ ಅರ್ಜಿಯನ್ನು accepted ಅಂತಾ ಬರುತ್ತದೆ.
ಅರ್ಜಿ ಶುಲ್ಕ: RPFನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ OBC ಮತ್ತು EWS ವರ್ಗದ ಅಭ್ಯರ್ಥಿಗಳು 500 ರೂ. ಮತ್ತು SC/ST, ಪಿಎಚ್ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: RPF ಕಾನ್ಸ್ಟೇಬಲ್ ಮತ್ತು SI ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ೨ ಹಂತಗಳಲ್ಲಿ ನಡೆಸಲಾಗುತ್ತದೆ. ಕಂಪ್ಯೂಟರ್ ಆಧಾರಿತ ಅಂದರೆ ಸಿಬಿಟಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ದೈಹಿಕ ಅರ್ಹತಾ ಪರೀಕ್ಷೆ (PET) ಮತ್ತು ದೈಹಿಕ ದಕ್ಷತೆ ಪರೀಕ್ಷೆ (PST) ನಡೆಸಲಾಗುತ್ತದೆ. ನಂತರ ದಾಖಲೆಗಳನ್ನು ಪರಿಶೀಲನೆಗೆ ಕರೆಯಲಾಗುತ್ತದೆ.
ಇದನ್ನೂ ಓದಿ: ಮೋದಿ ಅಲೆ ಇದೆ ಎಂಬ ಭ್ರಮೆಗೆ ಒಳಗಾಗಬಾರದು ಎಂದ ಬಿಜೆಪಿ ಅಭ್ಯರ್ಥಿ..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.