RRB Recruitment 2024: ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 9,144 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಇದೇ ಏಪ್ರಿಲ್ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮಾರ್ಚ್ 9ರಿಂದಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಕೇಂದ್ರ ಸರ್ಕಾರಿ ನೌಕರಿ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: NCBS Recruitment 2024: ಬೆಂಗಳೂರಿನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿರಿ
ಹುದ್ದೆಯ ವಿವರ: ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯಲ್ಲಿ ಟೆಕ್ನಿಷಿಯನ್ ಗ್ರೇಡ್-1- 1,092 ಮತ್ತು ಟೆಕ್ನಿಷಿಯನ್ ಗ್ರೇಡ್-3- 8,052 ಒಟ್ಟು 9,144 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇವೆ.
ಶೈಕ್ಷಣಿಕ ಅರ್ಹತೆ: ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಿಜಿಕ್ಸ್/ಎಲೆಕ್ಟ್ರಾನಿಕ್ಸ್/ಕಂಪ್ಯೂಟರ್ ಸೈನ್ಸ್/ಐಟಿ/ಇನ್ಸ್ಟ್ರುಮೆಂಟೇಶನ್ನಲ್ಲಿ ಬಿ.ಎಸ್ಸಿ, ಡಿಪ್ಲೊಮಾ, ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ: SC/ST & ಮಹಿಳಾ ಅಭ್ಯರ್ಥಿಗಳಿಗೆ 250 ರೂ. ಮತ್ತು ಉಳಿದ ಎಲ್ಲಾ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಅಖಿಲ ಭಾರತ
ವೇತನ: ಮಾಸಿಕ ₹19,900-₹29,200
ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/03/2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 8 ಆಗಿರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.