KAS ಪೂರ್ವಭಾವಿ ಪರೀಕ್ಷೆ: KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು?  ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 

Written by - Yashaswini V | Last Updated : Aug 15, 2024, 02:26 PM IST
  • ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ.
  • 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ- ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ
KAS ಪೂರ್ವಭಾವಿ ಪರೀಕ್ಷೆ:   KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ  title=

ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. 

ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ  ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. 

ಇದನ್ನೂ ಓದಿ- ವಿಶ್ವದ ಅತಿ ಎತ್ತರದ ಶಿಖರವಿದು ಆದರೆ ಮೌಂಟ್‌ ಎವರೆಸ್ಟ್ ಅಲ್ಲ..ಇದು ಅದಕ್ಕಿಂತ ಎತ್ತರವಾಗಿದೆ!!

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ.

ಇದನ್ನೂ ಓದಿಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. @INCKarnataka ಸರಕಾರ ಹಾಗೂ #KPSC ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ ಎಂದವರು ಆಗ್ರಹಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News