Shocking News: ಶಾಲೆಯ ವಾಶ್ ರೂಂನಲ್ಲಿ ವಿದ್ಯಾರ್ಥಿನಿ ಶವವಾಗಿ ಪತ್ತೆ!

Girl found dead in washroom: ಶನಿವಾರ ಬೆಳಗ್ಗೆ ವಾಶಿಯಲ್ಲಿರುವ ಸೇಂಟ್ ಮೇರಿಸ್ ಮಲ್ಟಿಪರ್ಪಸ್ ಹೈಸ್ಕೂಲ್ ಮತ್ತು ಜೂನಿಯರ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಶವ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

Written by - Puttaraj K Alur | Last Updated : Jul 16, 2023, 07:22 PM IST
  • ಶಾಲೆಯ ವಾಶ್ ರೂಂನಲ್ಲಿ 11 ವರ್ಷದ ವಿದ್ಯಾರ್ಥಿನಿ ಶವವಾಗಿ ಪತ್ತೆ
  • ನವಿ ಮುಂಬೈನ ವಾಶಿಯಲ್ಲಿ ಶನಿವಾರ ನಡೆದಿರುವ ಆಘಾತಕಾರಿ ಘಟನೆ
  • ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರಿಂದ ತನಿಖೆ
Shocking News: ಶಾಲೆಯ ವಾಶ್ ರೂಂನಲ್ಲಿ ವಿದ್ಯಾರ್ಥಿನಿ ಶವವಾಗಿ ಪತ್ತೆ! title=
ವಿದ್ಯಾರ್ಥಿನಿ ಶವವಾಗಿ ಪತ್ತೆ!

ನವಿಮುಂಬೈ: ಶಾಲೆಯ ವಾಶ್ ರೂಂನಲ್ಲಿ 11 ವರ್ಷದ ವಿದ್ಯಾರ್ಥಿನಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ನವಿ ಮುಂಬೈನ ವಾಶಿಯಲ್ಲಿ ಶನಿವಾರ ಈ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಸೇಂಟ್ ಮೇರಿಸ್ ವಿವಿಧೋದ್ದೇಶ ಪ್ರೌಢಶಾಲೆ ಮತ್ತು ಜೂನಿಯರ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಕೋಪರ್ ಖೈರಾನೆ ಮೂಲದ ಮುಗ್ದಾ ಕದಮ್ ಪ್ರಜ್ಞಾಹೀನಳಾಗಿ, ನೆಲದ ಮೇಲೆ ಬಿದ್ದು, ಗಾಯಗೊಂಡು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Midday Meal Scheme: ನಳೀನ್ ಕುಮಾರ್ ಕಟೀಲ್ ‘ಕೈ’ಗೆ ಬಳೆ ತೊಟ್ಟು ಪ್ರತಿಭಟಿಸಲಿ- ಕಾಂಗ್ರೆಸ್

ಬೆಳಿಗ್ಗೆ 10.30ರ ವಿರಾಮದ ಸಮಯದಲ್ಲಿ ವಿದ್ಯಾರ್ಥಿನಿ 3ನೇ ಮಹಡಿಯಲ್ಲಿರುವ ವಾಶ್ ರೂಂಗೆ ಹೋಗಿದ್ದಳು. ವಿರಾಮದ ಬಳಿಕ ಆಕೆ ಹಿಂತಿರುಗದಿದ್ದಾಗ ಸಹಪಾಠಿಗಳು ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಅವರು ವಿದ್ಯಾರ್ಥಿನಿಯನ್ನು ಹುಡುಕಲು ಪ್ರಾರಂಭಿಸಿದರು. ಈ ಮಧ್ಯೆ ಹೌಸ್ ಕೀಪಿಂಗ್ ಸಿಬ್ಬಂದಿ ವಾಶ್ ರೂಂಗೆ ಹೋಗಿ ನೋಡಿದಾಗ, ಒಂದು ಬಾಗಿಲು ಲಾಕ್ ಆಗಿರುವುದು ಕಂಡುಬಂದಿದೆ. ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಬಾಗಿಲು ಒಡೆದು ನೋಡಿದಾಗ ವಿದ್ಯಾರ್ಥಿನಿ ನೆಲದ ಮೇಲೆ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ವಿದ್ಯಾರ್ಥಿನಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ವೈದ್ಯರು ಆಕೆ ಸಾವನ್ನಪ್ಪಿದ್ದಾಳೆಂದು ತಿಳಿಸಿದ್ದಾರೆ.

ಮಾಹಿತಿ ಪಡೆದ ವಾಶಿ ಪೊಲೀಸರು ಅಧಿಕಾರಿಗಳ ತಂಡವನ್ನು ಶಾಲೆಗೆ ಕಳುಹಿಸಿದರು. ಈ ಬಗ್ಗೆ ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಲಾಗಿದೆ ಎಂದು ಕೋಪರ್ಖೈರಾನೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ವಿದ್ಯಾರ್ಥಿನಿ ಹೇಗೆ ಸಾವನ್ನಪ್ಪಿದ್ದಾಳೆಂಬುದು ಇದುವರೆತೂ ತಿಳಿದುಬಂದಿಲ್ಲ. ಹೀಗಾಗಿ ನಾವು ಈ ಬಗ್ಗೆ ಯಾವುದೇ ಪ್ರಕರಣ ದಾಖಲಿಸಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವ ನೀತಿನ್ ಗಡ್ಕರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News