SSC Recruitment 2024: ಕ್ಲರ್ಕ್ & ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

SSC CHSL Recruitment 2024: ಮೇ 1 ಅಂದರೆ ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

Written by - Puttaraj K Alur | Last Updated : May 1, 2024, 08:31 AM IST
  • ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್​ ಹೈಯರ್ ಸೆಕೆಂಡರಿ ಲೆವೆಲ್‌ನ ವಿವಿಧ ಹುದ್ದೆಗಳ ನೇಮಕಾತಿ
  • ಲೋವರ್ ಡಿವಿಶನ್ ಕ್ಲರ್ಕ್​/ಜೂನಿಯರ್ ಸೆಕ್ರೆಟರಿಯೇಟ್ & ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿ
  • ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ
SSC Recruitment 2024: ಕ್ಲರ್ಕ್ & ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! title=
SSC CHSL Recruitment 2024

SSC CHSL Recruitment 2024: ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ಕಂಬೈನ್ಡ್​ ಹೈಯರ್ ಸೆಕೆಂಡರಿ ಲೆವೆಲ್​ (10+2)ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಲೋವರ್ ಡಿವಿಶನ್ ಕ್ಲರ್ಕ್​/ಜೂನಿಯರ್ ಸೆಕ್ರೆಟರಿಯೇಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. 

ಮೇ 1 ಅಂದರೆ ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಬಳಿಕ ಮೊದಲ ಭೇಟಿ ನೀಡುತ್ತಿರುವ ರಾಷ್ಟ್ರಪತಿ ಮುರ್ಮು

ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಪೋಸ್ಟಿಂಗ್‌ ನೀಡಲಾಗುತ್ತದೆ.  

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇರವಾಗಿ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ SSCಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. 

ಇದನ್ನೂ ಓದಿ: ಸಮುದ್ರದ ಮಧ್ಯೆ ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ ಕಡಲ್ಗಳ್ಳರ ದಾಳಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News