ನಾಳೆ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಜು-21ರಂದು ಪ್ರಕಟವಾಗಲಿದೆ.

Written by - Manjunath Hosahalli | Edited by - Manjunath N | Last Updated : Jul 20, 2022, 07:31 PM IST
  • ಈ ಸಂಬಂಧ ಮಾಹಿತಿ ನೀಡಿರುವ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಒಟ್ಟು 37,479 ವಿದ್ಯಾರ್ಥಿಗಳು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ನಾಳೆ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ title=
ಸಾಂದರ್ಭಿಕ ಚಿತ್ರ

ಬೆಂಗಳೂರು: 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಜು-21ರಂದು ಪ್ರಕಟವಾಗಲಿದೆ.

ಈ ಸಂಬಂಧ ಮಾಹಿತಿ ನೀಡಿರುವ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಒಟ್ಟು 37,479 ವಿದ್ಯಾರ್ಥಿಗಳು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Udupi : ಚಾಕಲೇಟ್ ನುಂಗಿ ಉಸಿರುಗಟ್ಟಿ 6 ವರ್ಷದ ಬಾಲಕಿ ಸಾವು!

ಪೂರಕ ಪರೀಕ್ಷೆಗೆ ಒಟ್ಟು 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾದವರ ಪ್ರಮಾಣ ಶೇ.39.59 ಇದೆ ಎಂದು ತಿಳಿಸಿದರು.

ಇನ್ನುಳಿದಂತೆ ನಾಳೆ ಮಧ್ಯಾಹ್ನ 12 ಗಂಟೆ ನಂತರ ಈ ವೆಬ್‌ಸೈಟ್‌ನಲ್ಲಿ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ( https://karresults.nic.in/ ) ಫಲಿತಾಂಶ ವೀಕ್ಷಿಸಬಹುದು.

ಜೊತೆಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಲಭ್ಯವಾಗಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News