ಫೆ.26, 27ರಂದು ರಾಜ್ಯಮಟ್ಟದ ಉದ್ಯೋಗ ಮೇಳ: 500ಕ್ಕೂ ಹೆಚ್ಚು ಕಂಪನಿಗಳು ಭಾಗಿ

State level job fair: ಈ ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಈ ಮೇಳದಲ್ಲಿ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು ಹಾಗೂ ಖಾಸಗಿ ವಲಯದ ಯಾವುದೇ ನಿಯೋಜಕರು (ಕಂಪನಿಗಳು) ಭಾಗವಹಿಸಬಹುದಾಗಿದೆ. ​

Written by - Puttaraj K Alur | Last Updated : Feb 15, 2024, 11:22 PM IST
  • ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ರಾಜ್ಯಮಟ್ಟದ ಉದ್ಯೋಗ ಮೇಳ
  • ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 26, 27ರಂದು ಉದ್ಯೋಗ ಮೇಳ
  • ನಿರುದ್ಯೋಗಿ ಯುವಕ-ಯುವತಿಯರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು
ಫೆ.26, 27ರಂದು ರಾಜ್ಯಮಟ್ಟದ ಉದ್ಯೋಗ ಮೇಳ: 500ಕ್ಕೂ ಹೆಚ್ಚು ಕಂಪನಿಗಳು ಭಾಗಿ title=
ರಾಜ್ಯಮಟ್ಟದ ಉದ್ಯೋಗ ಮೇಳ

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದೆ. ನಿರುದ್ಯೋಗಿ ಯುವಕ-ಯುವತಿಯರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.  

ಇದನ್ನೂ ಓದಿ: Electoral Bonds: ಏನಿದು ಎಲೆಕ್ಟೋರಲ್ ಬಾಂಡ್ ಯೋಜನೆ.. ಸುಪ್ರೀಂ ಕೋರ್ಟ್ ರದ್ದುಗೊಳಿಸಲು ಕಾರಣ ಏನು?

ಸಿಎಂ ಸಿದ್ದರಾಮಯ್ಯನವರು ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ದೊರಕಿಸುವ ಉದ್ದೇಶದಿಂದ ವಿವಿಧ ಇಲಾಖೆಗಳ (ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಇತ್ಯಾದಿ) ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ಸಮಿತಿಯ ಮಾರ್ಗದರ್ಶನದಂತೆ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದೆ.

ಇದನ್ನೂ ಓದಿ: PINEWZನಲ್ಲಿ ಲೋಕಸಭೆ ಚುನಾವಣಾ ಸರ್ವೇ: ದೇಶದ ಪ್ರತಿಯೊಬ್ಬರೂ ಭಾಗವಹಿಸುವ ಸುವರ್ಣಾವಕಾಶ

ಈ ಉದ್ಯೋಗ ಮೇಳದಲ್ಲಿ ಸುಮಾರು 500ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಈ ಮೇಳದಲ್ಲಿ ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಿಂದ ಎಲ್ಲಾ ವಿದ್ಯಾರ್ಹತೆಯ ವಿದ್ಯಾರ್ಥಿಗಳು ಹಾಗೂ ಖಾಸಗಿ ವಲಯದ ಯಾವುದೇ ನಿಯೋಜಕರು (ಕಂಪನಿಗಳು) ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಮತ್ತು ಕಂಪನಿಗಳು ಅಧಿಕೃತ ವೆಬ್‌ಸೈಟ್‌ https://udyogamela.skillconnect.kaushalkar.com/ ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವುದರ ಮೂಲಕ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News