ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯಡಿ ತರಬೇತಿ : ಅರ್ಜಿ ಆಹ್ವಾನ

ಭಾರತೀಯ ಭಾಷಾ ಕೇಂದ್ರ (ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ) ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ಮಾನಸ ಗಂಗೋತ್ರಿ ಮೈಸೂರು ಇವರಿಂದ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯಡಿ 36 ನೇ ತಂಡದ ತರಬೇತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Nov 22, 2022, 01:22 AM IST
  • ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ರೂ. 250 ಡಿಮ್ಯಾಂಡ್ ಡ್ರಾಫ್ಟ್ಅನ್ನು ಕಳುಹಿಸಿ ಕೊಡಬೇಕು.
  • ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು.
  • ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.
ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯಡಿ ತರಬೇತಿ : ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಮೈಸೂರು: ಭಾರತೀಯ ಭಾಷಾ ಕೇಂದ್ರ (ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ) ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ಮಾನಸ ಗಂಗೋತ್ರಿ ಮೈಸೂರು ಇವರಿಂದ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯಡಿ 36 ನೇ ತಂಡದ ತರಬೇತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯಡಿ (ಕನ್ನಡ ಬಾರದ ಸರ್ಕಾರಿ ನೌಕರರಿಗೆ ಮತ್ತು ಸಾರ್ವಜನಿಕರಿಗೆ) ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನವಂಬರ್ 01, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿದೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದು. ನೋಂದಣಿತರು ಶುಲ್ಕವನ್ನು ಕೊಡಬೇಕಾಗಿಲ್ಲ.

ಇದನ್ನೂ ಓದಿ : ಕಾಂತಾರ ಸಿನಿಮಾ ಸ್ಪೂರ್ತಿದಾಯಕವಾಗಿದೆ ಎಂದ ಕಮಲ್ ಹಾಸನ್

ಕರ್ನಾಟಕದ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗಿನ ಅವರ ಕಚೇರಿ ಗೈರುಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಿನಾಯಿತಿಯಿದೆ.

ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದ್ದು, ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್. ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ 18 ರಿಂದ 50 ವಯಸ್ಸಿನ ಒಳಗಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ರೂ. 250 ಡಿಮ್ಯಾಂಡ್ ಡ್ರಾಫ್ಟ್ಅನ್ನು ಕಳುಹಿಸಿ ಕೊಡಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.

ಇದನ್ನೂ ಓದಿ : ಜನರ ಬದುಕು ಹಸನಾಗಲು ಕುಮಾರಣ್ಣ ಮತ್ತೊಮ್ಮೆ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮೂವತ್ತಾರನೆಯ ತಂಡದ ತರಬೇತಿಯು ನವೆಂಬರ್ 01 ರಿಂದ ಆರಂಭವಾಗಿದ್ದು, ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸ ಗಂಗೋತ್ರಿ, ಮೈಸೂರು-570 006, ದೂ.ಸಂ. 0821-2345128 ಇವರಿಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸಿತ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳು ಪ್ರಭಾರಿ ಅಧಿಕಾರಿಯವರಿಗೆ ಡಿಸೆಂಬರ್ 10ರ ಒಳಗೆ ತಲುಪಬೇಕು. ಎಂದು ಮೈಸೂರು ಮಾನಸ ಗಂಗೋತ್ರಿಯ ಪ್ರೊಫೆಸರ್ ಮತ್ತು ಉಪ ನಿರ್ದೇಶಕರು ಹಾಗೂ ಪ್ರಭಾರಿ ಅಧಿಕಾರಿ ಡಾ. ಪಿ.ಆರ್. ಧರ್ಮೇಶ್ ಫರ್ನಾಂಡಿಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

 

Trending News