ನಾಳೆ ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ : ಮುಂದಿನ ದಿನಾಂಕ ಯಾವುದು ಇಲ್ಲಿದೆ ವಿವರ

ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಕಾನೂನು, ಎಲೆಕ್ಟ್ರಾನಿಕ್ ವಿಜ್ಞಾನ ಮತ್ತು ಪರಿಸರ ವಿಜ್ಞಾನ ಸೇರಿದಂತೆ 17 ವಿಷಯಗಳ ಪರೀಕ್ಷೆಗಳು ಜನವರಿ 15 ರಂದು ಎರಡು ಪಾಳಿಗಳಲ್ಲಿ ನಡೆಯಬೇಕಿತ್ತು.   

Written by - Ranjitha R K | Last Updated : Jan 14, 2025, 03:09 PM IST
  • ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಯುಜಿಸಿ-ನೆಟ್ ಪರೀಕ್ಷೆ ಮುಂದೂ
  • ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡುವ ನಿರ್ಧಾರ
  • 17 ವಿಷಯಗಳ ಪರೀಕ್ಷೆಗಳು ಜನವರಿ 15 ರಂದು ನಡೆಯಬೇಕಿತ್ತು.
 ನಾಳೆ ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ : ಮುಂದಿನ ದಿನಾಂಕ ಯಾವುದು ಇಲ್ಲಿದೆ ವಿವರ  title=

UGC-NET exams  postponed : ಜನವರಿ 15, 2025 ಅಂದರೆ ನಾಳೆ ನಡೆಯಬೇಕಿದ್ದ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ-ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಯನ್ನು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಈ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. 

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡುವ ನಿರ್ಧಾರ  :
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎನ್‌ಟಿಎ ತಿಳಿಸಿದೆ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಕಾನೂನು, ಎಲೆಕ್ಟ್ರಾನಿಕ್ ವಿಜ್ಞಾನ ಮತ್ತು ಪರಿಸರ ವಿಜ್ಞಾನ ಸೇರಿದಂತೆ 17 ವಿಷಯಗಳ ಪರೀಕ್ಷೆಗಳು ಜನವರಿ 15 ರಂದು ಎರಡು ಪಾಳಿಗಳಲ್ಲಿ ನಡೆಯಬೇಕಿತ್ತು. 

ಇದನ್ನೂ ಓದಿ : ಎಷ್ಟು ವಿಧದ ಶಿಕ್ಷಣ ಸಾಲಗಳಿವೆ? ಪ್ರಯೋಜನಗಳು ಮತ್ತು ಹೇಗೆ ಅಪ್ಲೈ ಮಾಡಬೇಕೆಂದು ತಿಳಿಯಿರಿ

ಇನ್ನು 15ನೇ ಜನವರಿ 2025 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮಾತ್ರ ಮುಂದೂಡಲಾಗಿದೆ ಎನ್ನುವುದನ್ನು  ಎನ್‌ಟಿಎ  ಪ್ರಕಟಣೆಯಲ್ಲಿ ಸ್ಪಷ್ಟವಾಗಿ ಹೇಳಿದೆ. ಜನವರಿ 16 ರಂದು ನಿಗದಿಯಾಗಿರುವ ಪರೀಕ್ಷೆಯನ್ನು ಹಿಂದಿನ ವೇಳಾಪಟ್ಟಿಯಂತೆ ನಡೆಸಲಾಗುವುದು ಎಂದು ಎನ್‌ಟಿಎ ತಿಳಿಸಿದೆ. ಸಮಾಜಶಾಸ್ತ್ರ, ಜರ್ಮನ್ ಮತ್ತು ಹಿಂದೂ ಅಧ್ಯಯನಗಳು ಸೇರಿದಂತೆ 13 ವಿಷಯಗಳ ಪರೀಕ್ಷೆಗಳನ್ನು ಜನವರಿ 16 ರಂದು ನಿಗದಿಪಡಿಸಲಾಗಿದೆ. ಬುಧವಾರ ನಿಗದಿಯಾಗಿರುವ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ. 

UGC-NET ಭಾರತದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಯುಜಿಸಿ ಪರವಾಗಿ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF), ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ ಮತ್ತು ಪಿಎಚ್‌ಡಿ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ವರ್ಷಕ್ಕೆ ಎರಡು ಬಾರಿ ನಡೆಸುವ ರಾಷ್ಟ್ರೀಯ ಮಟ್ಟದ ಪರೀಕ್ಷೆಯಾಗಿದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News