UIDAI Recruitment: ತಿಂಗಳಿಗೆ 35,000 ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿ

UIDAI Recruitment 2024: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ​

Written by - Puttaraj K Alur | Last Updated : Apr 22, 2024, 06:10 PM IST
  • ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ
  • ಸಹಾಯಕ ವಿಭಾಗ ಅಧಿಕಾರಿ ಮತ್ತು ಸಹಾಯಕ ಖಾತೆ ಅಧಿಕಾರಿಗಳ ನೇಮಕ
  • ಜೂನ್ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಇಂದೇ ಅರ್ಜಿ ಸಲ್ಲಿಸಿರಿ
UIDAI Recruitment: ತಿಂಗಳಿಗೆ 35,000 ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿ title=
UIDAI Recruitment 2024

UIDAI Recruitment 2024: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UIDAIನಲ್ಲಿ ಸಹಾಯಕ ವಿಭಾಗ ಅಧಿಕಾರಿ ಮತ್ತು ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 

ವಯೋಮಿತಿ: UIDAI ನೇಮಕಾತಿಯಡಿ ಭರ್ತಿ ಮಾಡಿಕೊಳ್ಳುತ್ತಿರುವ ಹುದ್ದೆಗಳಿಗೆ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಜೂನ್ 13, 2024ಕ್ಕೆ 56 ವರ್ಷಗಳಿಗಿಂತ ಕಡಿಮೆಯಿರಬೇಕು.

ಇದನ್ನೂ ಓದಿ: Loksabha Election : ಚುನಾವಣಾ ಪ್ರಚಾರದಲ್ಲಿ ಶಾರುಖ್ ಖಾನ್! ಯಾವ ಪಕ್ಷದ ಪರ ಇವರ ನಡೆ ?

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯೋಚಿಸುತ್ತಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವೇತನ: ಸಹಾಯಕ ವಿಭಾಗ ಅಧಿಕಾರಿ ಹುದ್ದೆಗೆ 35,400-1,12,400 ರೂ. ವೇತನ ನೀಡಲಾಗುತ್ತದೆ ಮತ್ತು ಸಹಾಯಕ ಖಾತೆ ಅಧಿಕಾರಿ ಹುದ್ದೆಗೆ 47,600-1,51,100 ರೂ. ವೇತನ ನೀಡಲಾಗುತ್ತದೆ.

ಇದನ್ನೂ ಓದಿ: Daily GK Quiz: ಪ್ರಸಿದ್ಧ ಇಸ್ರೋದ ಪ್ರಧಾನ ಕಛೇರಿ ಎಲ್ಲಿದೆ..?

ಅರ್ಜಿ ಸಲ್ಲಿಸುವುದು ಹೇಗೆ..?: ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸರಿಯಾಗಿ ಭರ್ತಿ ಮಾಡಿದ ಅರ್ಜಿ ನಮೂನೆಯ ಪ್ರಿಂಟ್‌ಔಟ್ ತೆಗೆದುಕೊಂಡು ಅದನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ (UIDAI) ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು UIDAIನ ಅಧಿಕೃತ https://uidai.gov.in/ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News