2024ರ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭ

2024 ರಲ್ಲಿ ಪದವಿ, ಡಿಪ್ಲೋಮಾ  ತೇರ್ಗಡೆಯಾಗಿ 180 ದಿನ ನಿರುದ್ಯೋಗಿಗಳಾದ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಿರುತ್ತಾರೆ. ಯೋಜನೆಯ ಫಲಾನುಭವಿಯಾಗಲು ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ https://sevasindhugs.karnataka.gov.in/ ದಲ್ಲಿ ಅರ್ಜಿ ಸಲ್ಲಿಸಬೇಕು.

Written by - Manjunath N | Last Updated : Jan 4, 2025, 06:50 PM IST
 2024ರ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭ title=

ಧಾರವಾಡ: 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ, ಸ್ನಾಕೋತ್ತರ ಪದವಿ ಮತ್ತು ಡಿಪ್ಲೋಮಾ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅಗತ್ಯ ಮಾಹಿತಿ ನೀಡುವ ಬಿತ್ತಪತ್ರ ಹಾಗೂ ಪ್ರಚಾರ ಸಾಮಗ್ರಿಗಳನ್ನು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ ಹಾಗೂ ಇತರರು ಸಾಮಾಗ್ರಿಗಳನ್ನು ಬಿಡುಗಡೆ ಮಾಡಿ ಯುವ ನಿಧಿ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದರು.

ಯುವ ಜನತೆಯ ಭವಿಷ್ಯಕ್ಕಾಗಿ ಕರ್ನಾಟಕ ಸರ್ಕಾರದ ಈ ಗ್ಯಾರಂಟಿ ಯೋಜನೆಯನ್ನು ಪ್ರಾರಂಭಿಸಿದೆ. ಯುವನಿಧಿ ಯೋಜನೆಯಡಿ ಪದವೀಧರರಿಗೆ ರೂ. 3,000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ. 1,500 ನಿರುದ್ಯೋಗ ಭತ್ಯೆಯನ್ನು 2 ವರ್ಷಗಳವರೆಗೆ ನೀಡಲಾಗುವುದು. 2024 ರಲ್ಲಿ ಪದವಿ, ಡಿಪ್ಲೋಮಾ  ತೇರ್ಗಡೆಯಾಗಿ 180 ದಿನ ನಿರುದ್ಯೋಗಿಗಳಾದ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಿರುತ್ತಾರೆ. ಯೋಜನೆಯ ಫಲಾನುಭವಿಯಾಗಲು ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ https://sevasindhugs.karnataka.gov.in/ ದಲ್ಲಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: ವೃಷಭಾವತಿ ವ್ಯಾಲಿಗೆ ಕೊಳಚೆ ನೀರು ನಿಯಂತ್ರಣಕ್ಕೆ ಸಮಗ್ರ ಯೋಜನೆ ರೂಪಿಸಿ: ತುಷಾರ್ ಗಿರಿ ನಾಥ್

ಅರ್ಹ ಫಲಾನುಭವಿಗಳು ನ್ಯಾಶನಲ್ ಅಕ್ಯಾಡೆಮಿಕ ಡೆಪೆÇಸೆಟರಿ (NAD Portal) ನ ಜಾಲತಾಣ https://nad.karnataka.gov.in ನಲ್ಲಿ ವಿಶ್ವವಿದ್ಯಾನಿಲಯಗಳು, ಶೈಕ್ಷಣಿಕ ಸಂಸ್ಥೆಗಳು ನೀಡುವ ಪದವಿ, ಡಿಪ್ಲೊಮಾ, ತಾತ್ಕಾಲಿಕ ಪದವಿ ಪ್ರಮಾಣ ಪತ್ರಗಳ ಮೇಲೆ ನಮೂದಿಸಿರುವ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ದತ್ತಾಂಶವು ಲಭ್ಯವಿದೆಯೆ ಅಥವಾ ಇಲ್ಲವೇ ಎಂಬುದರ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಇಲ್ಲದೇ ಇದ್ದಲ್ಲಿ ಓಂಆ Poಡಿಣಚಿಟ ನಲ್ಲಿ ಸ್ವಯಂ ಪ್ರೇರಿತವಾಗಿ ನೋಂದಣಿ ಮಾಡತಕ್ಕದ್ದು ಅಥವಾ ತಮ್ಮ ಸಂಬಂಧಿತ ಕಾಲೇಜು, ಬೋರ್ಡ, ವಿಶ್ವ ವಿದ್ಯಾಲಯವನ್ನು ಸಂಪರ್ಕಿಸಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಇದನ್ನೂ ಓದಿ: ಶ್ರೇಷ್ಠ ನಟ ಡಾ ರಾಜ್​ಕುಮಾರ್ ಆದ್ರೆ, ನೆಚ್ಚಿನ ನಟ ಪುನೀತ್ - ಸಿಎಂ ಸಿದ್ದರಾಮಯ್ಯ

ಅಭ್ಯರ್ಥಿಗಳು ಯುವನಿಧಿಯ ನೋಂದಣಿಗಾಗಿ ಹಾಗೂ ಯೋಜನೆಯ ಪ್ರಯೋಜನೆ ಪಡೆಯಲು ಗ್ರಾಮೀಣ ಭಾಗದಲ್ಲಿ ಹತ್ತಿರದ ಗ್ರಾಮ ಒನ್ ಕೇಂದ್ರಗಳು ಹಾಗೂ ನಗರ ಪ್ರದೇಶಗಳಲ್ಲಿ ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳಿ ನೋಂದಣಿ ಮಾಡಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News