Shocking: ಯೂಟ್ಯೂಬ್ ನೋಡಿ ಆತ್ಮಹತ್ಯೆ ಮಾಡಿಕೊಂಡ 11 ವರ್ಷದ ಬಾಲಕಿ..!

Girl Suicide after watching YouTube: ಮೃತಳನ್ನು ಪ್ರವೀಣ್ ಶೆಟ್ಟಿ ಎಂಬವರ ಪುತ್ರಿ ಮಂಗಳಾದೇವಿ (11) ಎಂದು ಗುರುತಿಸಲಾಗಿದೆ. ಕುಂಜಾರುಗಿರಿಯ ಖಾಸಗಿ ಶಾಲೆಯಲ್ಲಿ ಈ ಬಾಲಕಿ 6ನೇ ತರಗತಿಯಲ್ಲಿ ಓದುತ್ತಿದ್ದಳು.

Written by - Puttaraj K Alur | Last Updated : Jan 16, 2023, 12:04 PM IST
  • ಯೂಟ್ಯೂಬ್ ನೋಡಿ 11 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ
  • ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿರುವ ಆಘಾತಕಾರಿ ಘಟನೆ
  • ಯೂಟ್ಯೂಬ್ ವಿಡಿಯೋದಲ್ಲಿನ ಪ್ರಯೋಗ ಮಾಡಲು ಯತ್ನಿಸಿ ಸಾವನ್ನಪ್ಪಿದ ಯುವತಿ?
Shocking: ಯೂಟ್ಯೂಬ್ ನೋಡಿ ಆತ್ಮಹತ್ಯೆ ಮಾಡಿಕೊಂಡ 11 ವರ್ಷದ ಬಾಲಕಿ..!     title=
11 ವರ್ಷದ ಬಾಲಕಿ ಆತ್ಮಹತ್ಯೆ!

ಉಡುಪಿ: ಉಡುಪಿಯ ಬ್ರಹ್ಮಗಿರಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಯೂಟ್ಯೂಬ್ ವಿಡಿಯೋ ನೋಡಿ 11 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೃತಳನ್ನು ಪ್ರವೀಣ್ ಶೆಟ್ಟಿ ಎಂಬವರ ಪುತ್ರಿ ಮಂಗಳಾದೇವಿ (11) ಎಂದು ಗುರುತಿಸಲಾಗಿದೆ. ಕುಂಜಾರುಗಿರಿಯ ಖಾಸಗಿ ಶಾಲೆಯಲ್ಲಿ ಈ ಬಾಲಕಿ 6ನೇ ತರಗತಿಯಲ್ಲಿ ಓದುತ್ತಿದ್ದಳು.

ಇದನ್ನೂ ಓದಿ: ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಕೊಡುಗೆ: ಕಾದು ನೋಡಿ: ಸಿಎಂ ಬೊಮ್ಮಾಯಿ

ಜ.14ರಂದು ಯೂಟ್ಯೂಬ್ ವಿಡಿಯೋ ನೋಡಿ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರ ಮಾಹಿತಿ ಪ್ರಕಾರ, ಶನಿವಾರ ಶಾಲೆಗೆ ಸರ್ಕಾರಿ ರಜೆ ಇತ್ತು. ಆಕೆಯ ಪೋಷಕರು ಕೆಲಸಕ್ಕೆ ಹೋಗಿದ್ದರು. ಸಂಜೆ ಮನೆಗೆ ಹಿಂದಿರುಗಿದಾಗ ಮಲಗುವ ಕೋಣೆಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ನಂತರ ಬಾಗಿಲು ಒಡೆದು ನೋಡಿದಾಗ ಮಂಗಳಾದೇವಿ ಸ್ನಾನಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಪೋಷಕರು ಬೆಚ್ಚಿಬಿದ್ದಿದ್ದಾರೆ.

ಮಂಗಳಾದೇವಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಆಕೆಯ ಬೆಡ್ ರೂಂನಲ್ಲಿ ಪೊಲೀಸರಿಗೆ ಟ್ಯಾಬ್ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಂಗಳಾದೇವಿ ಯೂಟ್ಯೂಬ್ ವಿಡಿಯೋ ನೋಡಿದ್ದಳು. ಅದರಲ್ಲಿನ ಪ್ರಯೋಗ ಮಾಡಲು ಹೋಗಿ ಸಾವನ್ನಪ್ಪಿದ್ದಾಳೆಂದು ಹೇಳಲಾಗುತ್ತಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: “ಆತ್ಮ ಕಳ್ಳ ಎಂದರೆ ಆ ಕ್ಷಣಕ್ಕೆ ಆತಹತ್ಯೆ ಮಾಡಿಕೊಳ್ತೇನೆ”: ಗೃಹ ಸಚಿವ ಜ್ಞಾನೇಂದ್ರ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News