ದಪ್ಪ ಇದ್ದೇನೆಂದು ಮನನೊಂದ MBBS ವಿದ್ಯಾರ್ಥಿನಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ!

MBBS Student Suicide: ಸೋಮವಾರ ಮುಂಜಾನೆ 3 ಗಂಟೆ ಹೊತ್ತಿಗೆ ಎಜೆ ಆಸ್ಪತ್ರೆಯ ಮಹಿಳಾ ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತಾ ಡೆತ್‍ನೋಟ್‌ ಬರೆದಿಟ್ಟಿದ್ದಾಳೆ.

Written by - Puttaraj K Alur | Last Updated : Nov 13, 2023, 07:25 PM IST
  • ಜೀವನದಲ್ಲಿ ಜಿಗುಪ್ಸೆಗೊಂಡು MBBS ವಿದ್ಯಾರ್ಥಿನಿ ಆತ್ಮಹತ್ಯೆ
  • ದಪ್ಪ ಇದ್ದೇನೆ, ನೋಡಲು ಚೆನ್ನಾಗಿಲ್ಲವೆಂದು ಯುವತಿ ಸೂಸೈಡ್
  • ಹಾಸ್ಟೆಲ್‍ ಕಟ್ಟಡದ 6ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ
ದಪ್ಪ ಇದ್ದೇನೆಂದು ಮನನೊಂದ MBBS ವಿದ್ಯಾರ್ಥಿನಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ! title=
MBBS ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ‘ನಾನು ದಪ್ಪ ಇದ್ದೇನೆ, ನೋಡಲು ಚೆನ್ನಾಗಿಲ್ಲ’ ಎಂದು ಮನನೊಂದ MBBS ವಿದ್ಯಾರ್ಥಿನಿಯೊಬ್ಬಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಗಳೂರಿನ ‌ಎಜೆ ಆಸ್ಪತ್ರೆ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.

ಪ್ರಕೃತಿ ಶೆಟ್ಟಿ ಸೋಮವಾರ ಮುಂಜಾನೆ 3 ಗಂಟೆ ಹೊತ್ತಿಗೆ ಎಜೆ ಆಸ್ಪತ್ರೆಯ ಮಹಿಳಾ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತಾ ಡೆತ್‍ನೋಟ್‌ ಬರೆದಿಟ್ಟಿದ್ದಾಳೆ.

ಇದನ್ನೂ ಓದಿ: ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲ:  ಡಿಕೆಶಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

MBBS ವಿದ್ಯಾರ್ಥಿನಿಯ ಡೆತ್‍ನೋಟ್‍ನಲ್ಲಿ ಏನಿದೆ..?

ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಪಕೃತಿ ಶೆಟ್ಟಿ ಡೆತ್‍ನೋಟ್ ಬರೆದಿದ್ದಾಳೆ. ‘ನನಗೆ MBBS ಮುಗಿಸಬೇಕು ಎಂದು ಬಹಳ ಆಸೆ ಇತ್ತು. ಆದರೆ ನಾನು ದಪ್ಪ ಇದ್ದೇನೆ. ನಾನು ನೋಡಲು ಚೆನ್ನಾಗಿ ಕಾಣ್ತಾ ಇಲ್ಲ. ನನ್ನ ಸೌಂದರ್ಯಕ್ಕೆ ದಪ್ಪ ಇರುವುದೇ ಅಡ್ಡಿಯಾಗಿದೆ. ನಾನು ತೂಕ ಇಳಿಸಲು, ಸಣ್ಣ ಆಗಲು ಸಾಕಷ್ಟು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ’ ಡೆತ್‍ನೋಟ್‍ನಲ್ಲಿ ಉಲ್ಲೇಖಿಸಿದ್ದಾಳೆ.   

ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕದ್ರಿ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರ ಮಗ ಈಶ್ವರಪ್ಪ ಪುತ್ರನ ರಾಜಕೀಯ ಭವಿಷ್ಯಕ್ಕೆ ಕಲ್ಲು ಹಾಕುವುದು ಖಚಿತ: ಕಾಂಗ್ರೆಸ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News