ನವದೆಹಲಿ: ಉತ್ತರ ಪ್ರದೇಶದಲ್ಲಿ ಘೋರ ದುರಂತ ಸಂಭವಿಸಿದ್ದು, ಕೆರೆಗೆ ಟ್ರ್ಯಾಕ್ಟರ್ ಪಲ್ಟಿಯಾಗಿ ಮಕ್ಕಳು ಸೇರಿದಂತೆ 22 ಮಂದಿ ದುರ್ಮರಣ ಹೊಂದಿದ್ದಾರೆ. ದುರಂತದಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿ ಈ ಘಟನೆ ಸಂಭವಿಸಿದೆ. ಮಾಘ ಪೂರ್ಣಿಮೆಯ ಸಂದರ್ಭದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನಕ್ಕಾಗಿ ಗ್ರಾಮದ ಜನರನ್ನು ಕದರ್‌ಗಂಜ್‌ಗೆ ಕರೆದೊಯ್ಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಕೆರೆಗೆ ಬಿದ್ದು ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: ಲೋಕಸಭೆ ಚುನಾವಣೆಗೂ ಮುನ್ನ ಕಬ್ಬು ರೈತರಿಗೆ ಪರಿಹಾರ..!ಎಫ್‌ಆರ್‌ಪಿ 25 ರಿಂದ 340 ರೂ.ಗೆ ಹೆಚ್ಚಳ..!
जनपद कासगंज में सड़क दुर्घटना में हुई जनहानि अत्यंत हृदय विदारक है। मेरी संवेदनाएं शोकाकुल परिजनों के साथ हैं।
जिला प्रशासन के अधिकारियों को सभी घायलों के समुचित निःशुल्क उपचार हेतु निर्देश दिए हैं।
प्रभु श्री राम से प्रार्थना है कि दिवंगत आत्माओं को शांति तथा घायलों को शीघ्र…
— Yogi Adityanath (@myogiadityanath) February 24, 2024
ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರ ಘೋಷಿಸಿದ್ದಾರೆ.
ʼಕಾಸ್ಗಂಜ್ ಜಿಲ್ಲೆಯಲ್ಲಿ ಸಂಭವಿಸಿದ ದುರಂತದಲ್ಲಿ ಆಗಿರುವ ಜೀವಹಾನಿಯು ಅತ್ಯಂತ ಹೃದಯ ವಿದ್ರಾವಕವಾಗಿದೆ. ನನ್ನ ಸಂತಾಪವು ದುಃಖಿತ ಕುಟುಂಬಗಳೊಂದಿಗೆ ಇರುತ್ತದೆ. ಎಲ್ಲಾ ಗಾಯಾಳುಗಳಿಗೆ ಸೂಕ್ತ ಉಚಿತ ಚಿಕಿತ್ಸೆ ನೀಡಲು ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆʼ ಎಂದು ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ. ಗಾಯಗೊಂಡಿರುವವರಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.
ಇದನ್ನೂ ಓದಿ: ಒಡಿಶಾ ಸರ್ಕಾರ : 27 ಹೊಸ ಕೈಗಾರಿಕಾ ಯೋಜನೆಗಳಿಗೆ 6,134 ಕೋಟಿ ರೂ. ಅನುಮೋದನೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.