ಹೈದರಾಬಾದ್: ವಿಮಾನದ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ 2.12 ಕೋಟಿ ರೂ. ಮೌಲ್ಯದ 3.73 ಕೆಜಿ ಚಿನ್ನ ಹಾಗೂ 16.46 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
ಇದನ್ನೂ ಓದಿ: Daily GK Quiz: ಜಗತ್ತಿನಲ್ಲಿ ಯಾವ ದೇಶವು ಹೆಚ್ಚು ವಿದ್ಯಾವಂತ ದೇಶವಾಗಿದೆ?
ಆರೋಪಿಗಳು ವಿಮಾನದ ಸೀಟಿನ ಅಡಿಯಲ್ಲಿ ಚಿನ್ನ ಹಾಗೂ ವಿದೇಶಿ ಕರೆನ್ಸಿಯನ್ನು ಬಚ್ಚಿಟ್ಟು ಸಾಗಿಸಲಾಗುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತೆಲಂಗಾಣ ಪೊಲೀಸರು ಸರಣಿ ಕಾರ್ಯಾಚರಣೆ ನಡೆಸಿ ಈ ಬೃಹತ್ ಜಾಲವನ್ನು ಬಯಲಿಗೆಳೆದಿದ್ದಾರೆ.
#WATCH | Telangana | In a series of operations on the basis of specific inputs and profiling, Hyderabad Airport Customs intercepted 6 passengers and seized a total of 3.734 kgs smuggled gold valued at Rs. 2.12 Crores and foreign currency worth Rs. 16.46 lakhs on 4-5 October.… pic.twitter.com/JC0rsG8Bp3
— ANI (@ANI) October 6, 2023
ಇದನ್ನೂ ಓದಿ: ಮುಂಬೈನ ಗೋರೆಗಾಂವ್ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ: 6 ಮೃತ, 40ಕ್ಕೂ ಹೆಚ್ಚು ಮಂದಿಗೆ ಗಾಯ
ಈ ಬಗ್ಗೆ ಖಚಿತ ಸುಳಿವಿನ ಆಧಾರದ ಮೇರೆಗೆ ಪೊಲೀಸರು ದಾಳಿಯೆಸಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.