Vijayapura: ಶಾಲಾ ಕಟ್ಟಡದಿಂದ ಬಿದ್ದು 5 ವರ್ಷದ ಮಗು ಸಾವು..!

Vijayapura Crime News: ಶಿವರಾಜ್ ಕಟ್ಟಡದಿಂದ ಬಿದ್ದ ಕೂಡಲೇ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಕರೆತರುವ ಮೊದಲೇ ಆತ ಸಾವನಪ್ಪಿದ್ದನೆಂದು ತಿಳಿದುಬಂದಿದೆ.

Written by - Puttaraj K Alur | Last Updated : Nov 22, 2023, 06:12 PM IST
  • ಶಾಲಾ ಕಟ್ಟಡದ ಮೇಲಿನಿಂದ ಬಿದ್ದು 5 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ
  • ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಆರ್.ಎಂ.ಶಹಾ ಶಾಲಾ ಆವರಣದಲ್ಲಿ ಘಟನೆ
  • ಶಾಲೆಯ ಮೊದಲ ಮಹಡಿಯಿಂದ ಬಿದ್ದು ಯುಕೆಜಿ ತರಗತಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ
Vijayapura: ಶಾಲಾ ಕಟ್ಟಡದಿಂದ ಬಿದ್ದು 5 ವರ್ಷದ ಮಗು ಸಾವು..! title=
UKG ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ

ವಿಜಯಪುರ: ಶಾಲೆಯ ಕಟ್ಟಡದಿಂದ ಬಿದ್ದು 5 ವರ್ಷದ ಮಗು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಆರ್.ಎಂ.ಶಹಾ ಶಾಲೆ(RM Shah Public School)ಯ ಆವರಣದಲ್ಲಿ ನಡೆದಿದೆ.

ಶಾಲೆಯ ಮೊದಲ ಮಹಡಿಯಿಂದ ಬಿದ್ದು ಯುಕೆಜಿ ತರಗತಿಯ ವಿದ್ಯಾರ್ಥಿ ಶಿವರಾಜ್ ರೂಡಗಿ (5) ಬಿದ್ದು ಮೃತಪಟ್ಟಿದ್ದಾನೆ. ಶಾಲೆಗೆ ಬಂದಿದ್ದ ವಿದ್ಯಾರ್ಥಿ ಶಿವರಾಜ್ ಮೊದಲನೇ ಮಹಡಿಗೆ ಹೋಗಿದ್ದಾನೆ. ಈ ವೇಳೆ ಮಹಡಿಯಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: ತಾಯಿ, ಮಗು ಸಾವಿನ ನೈತಿಕ ಹೊಣೆ ಹೊತ್ತು ಸಚಿವ ಜಾರ್ಜ್ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಅಶೋಕ್ ಆಗ್ರಹ

ಮೃತ ವಿದ್ಯಾರ್ಥಿ ಶಿವರಾಜ್ ಇಂಡಿ ತಾಲೂಕಿನ ಮಾವಿನಹಳ್ಳಿ ಗ್ರಾಮದವನು. ಶಿವರಾಜ್ ಕಟ್ಟಡದಿಂದ ಬಿದ್ದ ಕೂಡಲೇ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಕರೆತರುವ ಮೊದಲೇ ಆತ ಸಾವನಪ್ಪಿದ್ದನೆಂದು ತಿಳಿದುಬಂದಿದೆ.

ವಿದ್ಯಾರ್ಥಿ ಸಾವನ್ನಪ್ಪಿರುವ ವಿಷಯ ತಿಳಿದ ಶಾಲಾ ಆಡಳಿತ ಮಂಡಳಿಯವರು ಆತನ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.    

ಇದನ್ನೂ ಓದಿ: ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News