ಬೆಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ

Bengaluru Fire Breaks Out: ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ. 

Written by - Yashaswini V | Last Updated : May 7, 2024, 03:07 PM IST
  • ಖಾಸಗಿ‌ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ
  • ರಕ್ಷಾ ಆಸ್ಪತ್ರೆಯಲ್ಲಿ ನಡೆದಿರುವ ಘಟನೆ
  • ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ title=

Bengaluru Fire Breaks Out: ಬೆಂಗಳೂರು ನಗರದ ಉತ್ತರ ಹೊರವಲಯದ ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ರಕ್ಷಾ ಹೆಲ್ತ್ ಕೇರ್‌ ಖಾಸಗಿ ಆಸ್ಪತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಮಂಗಳವಾರ (ಮೇ 07) ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ. 

ರಕ್ಷಾ ಹೆಲ್ತ್ ಕೇರ್‌ಗೆ ಧಾವಿಸಿದ ಆರು ಅಗ್ನಿಶಾಮಕ ಟೆಂಡರ್‌ಗಳು: 
ಇನ್ನೂ ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ, ರಾಜಾಜಿನಗರ, ಬಾಣಸವಾಡಿ, ಯಲಹಂಕ, ಹೆಬ್ಬಾಳ, ದೇವನಹಳ್ಳಿ, ಮತ್ತು ದೊಡ್ಡಬಳ್ಳಾಪುರ ಅಗ್ನಿಶಾಮಕ ಠಾಣೆಗಳಿಂದ ಆರು ಅಗ್ನಿಶಾಮಕ ಟೆಂಡರ್‌ಗಳು (Fire tenders) ರಕ್ಷಾ ಹೆಲ್ತ್ ಕೇರ್‌ಗೆ (Raksha Health Care) ಧಾವಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ ಎಂದು ಬೆಂಗಳೂರಿನ ಅಗ್ನಿಶಾಮಕ ನಿಯಂತ್ರಣ ಕೊಠಡಿಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ- Viral CCTV Video: ಪ್ರೀವೇಡ್ಡಿಂಗ್ ಪಾರ್ಟಿಯಲ್ಲಿ 5 ಹೊಟೇಲ್ ಮೇಲ್ಛಾವಣಿಯಿಂದ ಯುವಕನನ್ನು ಕೆಳಕ್ಕೆ ಎಸೆದ ತಂದೆ-ಮಗ Watch Video

ಎಂದಿಡು ಘಟನೆ: 
ಇಂದು (ಮೇ 07) ಬೆಳಿಗ್ಗೆ 9ಗಂಟೆ ಸುಮಾರಿಗೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣೆ (Rajanukunte Police Station) ವ್ಯಾಪ್ತಿಯಲ್ಲಿ ಬರುವ ರಕ್ಷಾ ಆಸ್ಪತ್ರೆಯ (Raksha Hospital) ಕಟ್ಟಡದ ನೆಲಮಾಳಿಗೆಯಲ್ಲಿರುವ ರಾಸಾಯನಿಕ ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡು ಇದ್ದಕ್ಕಿದ್ದಂತೆ ಇಡೀ ಕಟ್ಟಡವನ್ನು ಆವರಿಸಿದೆ. 

ಅಗ್ನಿ ದುರಂತದಲ್ಲಿ ದಟ್ಟ ಹೊಗೆ ಕಟ್ಟಡವನ್ನು ಸಂಪೂರ್ಣ ಆವರಿಸಿದ್ದರಿಂದ ಕೂಡಲೇ ಆಸ್ಪತ್ರೆಯಲ್ಲಿದ್ದ ಜನ, ಸಿಬ್ಬಂದಿ ಕಟ್ಟದದಿಂದ ಹೊರಬಂದಿದ್ದಾರೆ. ನಂತರ ಬೆಳಿಗ್ಗೆ 9.15ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ  ರಾಜಾನುಕುಂಟೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇದನ್ನೂ ಓದಿ- ರಾಜಧಾನಿಯಲ್ಲಿ ನೈಜೀರಿಯಾ ಪ್ರಜೆಗಳ ಪುಂಡಾಟ : ಸಿಸಿಬಿ ಪೊಲೀಸ್ರ ಮೇಲೆ ಹಲ್ಲೆ ಮಾಡಿ ಎಸ್ಕೇಪ್

ಈ ಅಗ್ನಿ ದುರಂತದಲ್ಲಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಇದುವರೆಗೂ ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ರಾಜಾನುಕುಂಟೆ ಪೊಲೀಸರು ಈ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News