ಆಟೋಗೆ ಡಿಕ್ಕಿ ಹೊಡೆದ ಲಾರಿ: ಓರ್ವ ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

Road Accident: ಅಪಘಾತ ಬಳಿಕ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸಿದ್ದು ಸ್ಥಳೀಯರು ವಾಹನವನ್ನು ಬೆನ್ನಟ್ಟಿ ನಗರದ ಬೈಪಾಸ್ ಬಳಿ ಲಾರಿಯನ್ನು ತಡೆದು ಚಾಲಕ ಹಾಗೂ ವಾಹನವನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.

Written by - Yashaswini V | Last Updated : Apr 10, 2023, 08:58 PM IST
  • ಇಂದು ಸಂಜೆ 7 ಗಂಟೆಯಲ್ಲಿ ನಗರದಿಂದ ಉಡುಮಲ ಕುಂಟೆ ಗ್ರಾಮಕ್ಕೆ ತೆರಳುತ್ತಿದ್ದ ಆಟೋ
  • ಆಟೋಗೆ ಹಿಂದೂಪುರದಿಂದ ಬರುತ್ತಿದ್ದ ಕ್ಯಾಂಟರ್ ವಾಹನ ಡಿಕ್ಕಿ
  • ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನಪ್ಪಿದ್ದು ಮೂವರ ಸ್ಥಿತಿ ಚಿಂತಾಜನಕ
ಆಟೋಗೆ ಡಿಕ್ಕಿ ಹೊಡೆದ ಲಾರಿ: ಓರ್ವ ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ  title=

Road Accident: ಲಾರಿ ಚಾಲಕನ ಅಜಾಗರೂಕತೆ ಚಾಲನೆಯಿಂದ ಆಟೋ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಕುರುಗೋಡು ಗ್ರಾಮದ ಬಳಿ ನಡೆದಿದೆ.

ಇಂದು ಸಂಜೆ 7 ಗಂಟೆಯಲ್ಲಿ ನಗರದಿಂದ ಉಡುಮಲ ಕುಂಟೆ ಗ್ರಾಮಕ್ಕೆ ತೆರಳುತ್ತಿದ್ದ ಆಟೋ ಹಾಗೂ ಹಿಂದೂಪುರದಿಂದ ಬರುತ್ತಿದ್ದ ಕ್ಯಾಂಟರ್ ವಾಹನ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನಪ್ಪಿದ್ದು ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ- ಮ್ಯೂಸಿಕ್ ನಿಲ್ಲಿಸುವಂತೆ ಹೇಳಿದ ಗರ್ಭಿಣಿ ಮಹಿಳೆ ಮೇಲೆ ಗುಂಡಿನ ದಾಳಿ, ಆಸ್ಪತ್ರೆಯಲ್ಲಿ ಸಾವು 

ಅಪಘಾತ ಬಳಿಕ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸಿದ್ದು ಸ್ಥಳೀಯರು ವಾಹನವನ್ನು ಬೆನ್ನಟ್ಟಿ ನಗರದ ಬೈಪಾಸ್ ಬಳಿ ಲಾರಿಯನ್ನು ತಡೆದು ಚಾಲಕ ಹಾಗೂ ವಾಹನವನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.

ಇದನ್ನೂ ಓದಿ- ಗಂಡ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಹೆಂಡತಿ ಆತ್ಮಹತ್ಯೆ

ಇನ್ನು ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News