ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ! ಕಾರಣವೇನು ಗೊತ್ತಾ?

Visakhapatnam Polytechnic College student suicide: ವಿದ್ಯಾರ್ಥಿನಿ ತನ್ನ ಸಹೋದರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕ್ಷಮೆಯಿರಲಿ ಎಂದು ಹೇಳಿದ್ದಾಳೆ.

Written by - Puttaraj K Alur | Last Updated : Mar 31, 2024, 04:22 PM IST
  • ಕಾಲೇಜು ಕಟ್ಟಡದಿಂದ ಜಿಗಿದು 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ
  • ಕಾಲೇಜಿನಲ್ಲಿ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ವಿದ್ಯಾರ್ಥಿನಿ
  • ವಿಶಾಖಪಟ್ಟಣಂನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ
ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ! ಕಾರಣವೇನು ಗೊತ್ತಾ?  title=
ವಿದ್ಯಾರ್ಥಿನಿ ಆತ್ಮಹತ್ಯೆ!

ನವದೆಹಲಿ: ಕಾಲೇಜು ಕಟ್ಟಡದಿಂದ ಜಿಗಿದು 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಯುವತಿ ಡೆತ್‌ನೋಟ್‌ ಬರೆದಿದ್ದು, ಆಘಾತಕಾರಿ ಅಂಶ ಹೊರಬಿದ್ದಿದೆ. 

ಕಾಲೇಜು ಕ್ಯಾಂಪಸ್‌ನಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು. ಕಿರುಕುಳ ನೀಡಿದವರು ತನ್ನ ಫೋಟೋಗಳನ್ನು ತೆಗೆದುಕೊಂಡು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಸಂಸ್ಥೆಯ ಅಧಿಕಾರಿಗಳಿಗೆ ಅಥವಾ ಪೊಲೀಸರಿಗೆ ದೂರು ನೀಡಲು ಸಾಧ್ಯವಾಗಲಿಲ್ಲವೆಂದು ವಿದ್ಯಾರ್ಥಿನಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ.   

ಇದನ್ನೂ ಓದಿ: Viral Video: ಈ ವಿಡಿಯೋ ನೋಡಿದ್ರೆ ʼಕೋಕಾ-ಕೋಲಾʼ ಸಹವಾಸಕ್ಕೇ ಹೋಗಲ್ಲ!

ವಿದ್ಯಾರ್ಥಿನಿ ತನ್ನ ಸಹೋದರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕ್ಷಮೆಯಿರಲಿ ಎಂದು ಹೇಳಿದ್ದಾಳೆ. ʼಕ್ಷಮಿಸಿ ಅಕ್ಕ, ನಾನು ಹೋಗಬೇಕಾಗಿದೆʼ ಎಂದು ಆಕೆ ಹೇಳಿದ್ದಾಳೆ. ಲೈಂಗಿಕ ಕಿರುಕುಳದ ಆರೋಪ ಮಾಡಿರುವ ವಿದ್ಯಾರ್ಥಿನಿ ತನ್ನಂತೆಯೇ ಕಾಲೇಜಿನ ಇತರ ಹಲವಾರು ವಿದ್ಯಾರ್ಥಿನಿಯರು ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಅಂತಾ ಹೇಳಿದ್ದಾಳೆ.  

ವಿಶಾಖಪಟ್ಟಣಂನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓದುತ್ತಿದ್ದ ಮೃತ ವಿದ್ಯಾರ್ಥಿನಿಯ ಕುಟುಂಬಸ್ಥರು ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಗುರುವಾರ ರಾತ್ರಿ 10 ಗಂಟೆ ವೇಳೆಗೆ ಆಕೆ ನಾಪತ್ತೆಯಾದ ನಂತರ ಸಂಸ್ಥೆಯ ಅಧಿಕಾರಿಗಳಿಂದ ಕರೆ ಬಂದಿತ್ತು. ಸ್ವಲ್ಪ ಸಮಯದವರೆಗೆ ಆಕೆ ತನ್ನ ಪೋಷಕರ ಫೋನ್‌ಗೆ ಉತ್ತರಿಸದಿದ್ದಾಗ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಶುಕ್ರವಾರ ಮಧ್ಯರಾತ್ರಿ 12.50ರ ವೇಳೆಗೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ರಾಷ್ಟ್ರಪತಿ ಭವನದಲ್ಲಿಂದು ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಭಾರತ ರತ್ನ' ಪ್ರಧಾನ ಮಾಡಿದ ರಾಷ್ಟ್ರಪತಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News