Blackmail Case : ಅಶ್ಲೀಲ ಫೋಟೋ-ವಿಡಿಯೋ ಇಟ್ಟುಕೊಂಡು ಪ್ರಾಧ್ಯಾಪಕನಿಂದ ₹21 ಲಕ್ಷ ದೋಚಿದ ಮಹಿಳೆ!

ನಿವೃತ್ತ ಪ್ರಾಧ್ಯಾ ಪಕರೊಬ್ಬರ ಜೊತೆ ಸಲುಗೆ ಬೆಳೆಸಿಕೊಂಡ ಮಹಿಳೆಯೊಬ್ಬಳು, ಅವರ ಅಶ್ಲೀಲ ಫೋಟೋ ಮತ್ತು ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್‌ಮೇಲ್ ಮಾಡಿ, ಬರೋಬ್ಬರಿ ₹21 ಲಕ್ಷ ದೋಚಿದ್ದಾಳೆ.

Written by - Zee Kannada News Desk | Last Updated : Oct 13, 2022, 07:20 PM IST
  • ನಿವೃತ್ತ ಪ್ರಾಧ್ಯಾ ಪಕರೊಬ್ಬರ ಜೊತೆ ಸಲುಗೆ ಬೆಳೆಸಿಕೊಂಡ ಮಹಿಳೆ
  • ಅಶ್ಲೀಲ ಫೋಟೋ - ವಿಡಿಯೊ ಹರಿಬಿಡುವುದಾಗಿ ಬ್ಲಾಕ್‌ಮೇಲ್
  • ಬರೋಬ್ಬರಿ ₹21 ಲಕ್ಷ ದೋಚಿದ ಮಹಿಳೆ!
Blackmail Case : ಅಶ್ಲೀಲ ಫೋಟೋ-ವಿಡಿಯೋ ಇಟ್ಟುಕೊಂಡು ಪ್ರಾಧ್ಯಾಪಕನಿಂದ ₹21 ಲಕ್ಷ ದೋಚಿದ ಮಹಿಳೆ! title=

ಹುಬ್ಬಳ್ಳಿ : ನಿವೃತ್ತ ಪ್ರಾಧ್ಯಾ ಪಕರೊಬ್ಬರ ಜೊತೆ ಸಲುಗೆ ಬೆಳೆಸಿಕೊಂಡ ಮಹಿಳೆಯೊಬ್ಬಳು, ಅವರ ಅಶ್ಲೀಲ ಫೋಟೋ ಮತ್ತು ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್‌ಮೇಲ್ ಮಾಡಿ, ಬರೋಬ್ಬರಿ ₹21 ಲಕ್ಷ ದೋಚಿದ್ದಾಳೆ.

ಅಂಜಲಿ ಶರ್ಮಾ ಎಂಬಾಕೆ ಧಾರವಾಡದ ಆ ಪ್ರಾಧ್ಯಾಪಕರಿಗೆ ವಾಟ್ಸ್‌ಆ್ಯಪ್ ವಿಡಿಯೊ ಕರೆ ಮೂಲಕ ಪರಿಚಯವಾಗಿದ್ದಳು. ಸ್ನೇಹ ಸಲುಗೆಗೆ ತಿರುಗಿತ್ತು. ವಾಟ್ಸ್‌ಆ್ಯಪ್‌ನಲ್ಲಿ ಇಬ್ಬರೂ ತಮ್ಮ ಖಾಸಗಿ ವಿಡಿಯೊ ಹಾಗೂ ಫೋಟೊಗಳನ್ನು ವಿನಿಮಯ ಮಾಡಿಕೊಂಡಿದ್ದರು. ವಿಡಿಯೊ ಕಾಲ್‌ನಲ್ಲಿಯೂ ಮಾತನಾಡಿದ್ದರು.

ಇದನ್ನೂ ಓದಿ : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿಆತ್ಮಹತ್ಯೆ: ತಾಯಿ ಶವದ ಮುಂದೆ ಮಕ್ಕಳ ಕಣ್ಣೀರು

ಕೆಲ ದಿನಗಳ ನಂತರ ಅಂಜಲಿ ಪ್ರಾಧ್ಯಾಪಾಕರ ಖಾಸಗಿ ವಿಡಿಯೊ, ಫೋಟೊ, ವಿಡಿಯೊ ಕರೆಯ ಸ್ಕ್ರೀನ್‌ಶಾಟ್‌ಗಳನ್ನು ತೋರಿಸಿ ₹3 ಲಕ್ಷ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ್ದಾಳೆ. ನಂತರ, ಆಕೆಯ ಸಹಚರ ವಿಕ್ರಮ್ ಎಂಬಾತ ತಾನು ಸೈಬರ್ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಪ್ರಾಧ್ಯಾಪಕರಿಗೆ ಕರೆ ಮಾಡಿದ್ದಾನೆ.

ನಿಮಗೆ ಬ್ಲಾಕ್‌ಮೇಲ್ ಮಾಡಿರುವ ಅಂಜಲಿ ನನಗೆ ಪರಿಚಯವಿದ್ದು, ನಿಮ್ಮ ಫೋಟೊ ಮತ್ತು ವಿಡಿಯೊಗಳನ್ನು ಡೆಲಿಟ್ ಮಾಡಿಸುತ್ತೇನೆ. ಅದಕ್ಕಾಗಿ, ನನಗೆ ₹5 ಲಕ್ಷ ಕೊಡಬೇಕು ಎಂದಿದ್ದಾನೆ. ಪ್ರಾಧ್ಯಾಪಕರ ಬ್ಯಾಂಕ್ ಖಾತೆಯ ವಿವರ ಪಡೆದು, ಆನ್‌ಲೈನ್‌ನಲ್ಲಿ ಹಂತಹಂತವಾಗಿ ₹21 ಲಕ್ಷವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Crime News : ಹಿಂದೂ ಯುವಕನ ಬಲವಂತವಾಗಿ ಕತ್ನಾ: ಮಾಜಿ ಕಾರ್ಪೋರೇಟರ್ ಸೇರಿ ಮೂವರು ಅರೆಸ್ಟ್ 

ಕನ್ನಡ ಭಾಷೆಯಲ್ಲ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News