ಪುಂಡರ ವ್ಹೀಲಿಂಗ್ ಹುಚ್ಚಾಟದಿಂದ ಅಪಘಾತ "ಯುವತಿಯರ ಸ್ಥಿತಿ ಗಂಭೀರ"

Wheeling: ಈ ದುರ್ಘಟನೆಯಲ್ಲಿ ಯುವತಿಯರ ಬೈಕ್ ನೆಲಕ್ಕೆ ಅಪ್ಪಳಿಸಿದ್ದು, ಇಬ್ಬರೂ ಯುವತಿಯರಿಗೂ ಗಂಭೀರ ಗಾಯಗಳಾಗಿವೆ. ಭೂಮಿಕಾ ಎಂಬ ಯುವತಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. 

Written by - Yashaswini V | Last Updated : Jun 29, 2023, 10:07 AM IST
  • ಈ ಘಟನೆಗೆ ಕಾರಣನಾದ ವೀಲಿಂಗ್ ಮಾಡುತ್ತಿದ್ದ ಪುಂಡನನ್ನು ಶಾಕೀರ್ ಎಂದು ಗುರುತಿಸಲಾಗಿದೆ
  • ಇನ್ನೊಬ್ಬ ಅಪ್ರಾಪ್ತ ವಯಸ್ಕನಾಗಿದ್ದಾನೆ ಎಂದು ತಿಳಿದುಬಂದಿದೆ.
  • ಜನನಿಬಿಡ ಪ್ರದೇಶದಲ್ಲಿ ವ್ಹೀಲಿಂಗ್ ಹುಚ್ಚಾಟದಿಂದ ಯುವತಿಯರ ಪ್ರಾಣಕ್ಕೆ ಸಂಚಕಾರ ತಂದಿರುವ ಈ ಇಬ್ಬರನ್ನೂ ಸಾರ್ವಜನಿಕರು ಸ್ಥಳದಲ್ಲೇ ಹಿಡಿದು ಬಟ್ಟೆ ಕಳಚಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪುಂಡರ ವ್ಹೀಲಿಂಗ್ ಹುಚ್ಚಾಟದಿಂದ ಅಪಘಾತ "ಯುವತಿಯರ ಸ್ಥಿತಿ ಗಂಭೀರ" title=

Wheeling Accident: ಹಾಸನದಲ್ಲಿ ಪುಂಡರ ಬೈಕ್ ವ್ಹೀಲಿಂಗ್ ಹುಚ್ಚಾಟದಿಂದ  ಭೀಕರ ಅಪಘಾತ ಸಂಭವಿಸಿದೆ. ಪುಂಡರ ವ್ಹೀಲಿಂಗ್ ಹುಚ್ಚಾಟಕ್ಕೆ ಯುವತಿಯರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. 

ಹೌದು,  ಬೈಕ್ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಇಬ್ಬರು ಯುವತಿಯರು ಆಸ್ಪತ್ರೆ ಸೇರಿರುವ ಘಟನೆ ಹಾಸನ ನಗರದ ಸಾಲಗಾಮೆ ರಸ್ತೆಯ ಸಹ್ಯಾದ್ರಿ ಚಿತ್ರಮಂದಿರ ಬಳಿ ಘಟನೆ ನಡೆದಿದೆ. ನಿನ್ನೆ (ಬುಧವಾರ, 28 ಜೂನ್) ರಾತ್ರಿ ಸಾಲಗಾಮೆ ರಸ್ತೆಯ ಫುಡ್ ಕೋರ್ಟ್‌ನಲ್ಲಿ ಊಟ ಮುಗಿಸಿಕೊಂಡು ಭೂಮಿಕಾ, ಸಿಂಚನ ಎಂಬ ಯುವತಿಯರು ದ್ವಿಚಕ್ರ ವಾಹನದಲ್ಲಿ  ಮನೆಗೆ ತೆರಳುತ್ತಿದ್ದರು. ಇದೇ ವೇಳೆ ಹುಚ್ಚಾಟ, ನಿರ್ಲಕ್ಷ್ಯ ಹಾಗೂ ಅತಿವೇಗವಾಗಿ ವೀಲಿಂಗ್ ಮಾಡಿಕೊಂಡು ಬಂದ ಯುವಕರ ಬೈಕ್ ಈ ಯುವತಿಯರು ತೆರಳುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. 

ಇದನ್ನೂ ಓದಿ- ವಿವಾಹಿತೆ ಜೊತೆ ಪೊಲೀಸಪ್ಪನ ವಿವಾಹೇತರ ಸಂಬಂಧ-ಮದುವೆಗೆ ಪಟ್ಟು ಹಿಡಿದಿದ್ದಕ್ಕೆ ನಾಪತ್ತೆ!!

ದುರ್ಘಟನೆಯಲ್ಲಿ ಯುವತಿಯರ ಬೈಕ್ ನೆಲಕ್ಕೆ ಅಪ್ಪಳಿಸಿದ್ದು, ಇಬ್ಬರೂ ಯುವತಿಯರಿಗೂ ಗಂಭೀರ ಗಾಯಗಳಾಗಿವೆ. ಭೂಮಿಕಾ ಎಂಬ ಯುವತಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. 

ಇನ್ನೂ ಈ ಘಟನೆಗೆ ಕಾರಣನಾದ ವೀಲಿಂಗ್ ಮಾಡುತ್ತಿದ್ದ ಪುಂಡನನ್ನು ಶಾಕೀರ್ ಎಂದು ಗುರುತಿಸಲಾಗಿದ್ದು ಇನ್ನೊಬ್ಬ ಅಪ್ರಾಪ್ತ ವಯಸ್ಕನಾಗಿದ್ದಾನೆ ಎಂದು ತಿಳಿದುಬಂದಿದೆ. ಜನನಿಬಿಡ ಪ್ರದೇಶದಲ್ಲಿ ವ್ಹೀಲಿಂಗ್ ಹುಚ್ಚಾಟದಿಂದ ಯುವತಿಯರ ಪ್ರಾಣಕ್ಕೆ ಸಂಚಕಾರ ತಂದಿರುವ ಈ ಇಬ್ಬರನ್ನೂ ಸಾರ್ವಜನಿಕರು ಸ್ಥಳದಲ್ಲೇ ಹಿಡಿದು ಬಟ್ಟೆ ಕಳಚಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. 

ಈ ದುರ್ಘಟನೆಗೆ ಪ್ರಮುಖವಾಗಿ ಕಾರಣನಾದ ಶಾಕೀರ್ (ವ್ಹೀಲರ್) ಹಾಗೂ ಅಪ್ರಾಪ್ತ ವಯಸ್ಕನನ್ನು ಹಾಸನ ನಗರ ಪೊಲೀಸರು ಅರೆಸ್ಟ್ ಮಾಡಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಇದನ್ನೂ ಓದಿ- ಚಾಮರಾಜನಗರದಲ್ಲಿ ದಂಪತಿ- ಮಗಳು ಸೇರಿ ಮೂವರ ಆತ್ಮಹತ್ಯೆ

ಈ ಘಟನೆಗೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು, ಇತ್ತೀಚಿನ ದಿನಗಳಲ್ಲಿ ಹಾಸನ ನಗರದಲ್ಲಿ ವ್ಹೀಲಿಂಗ್ ಪುಂಡರ ಹಾವಳಿ ಮಿತಿ ಮೀರುತ್ತಿದೆ. ಮದ್ಯಪಾನ ಮಾಡಿ ನಿರ್ಲಕ್ಷ್ಯದಿಂದ ಚಲಾಯಿಸುವುದು ಮಾತ್ರವಲ್ಲದೆ, ಹೆಲ್ಮೆಟ್ ಕೂಡ ಧರಿಸಿರುವುದಿಲ್ಲ. ಇದಲ್ಲದೆ, ಜನನಿಬಿಡ ಪ್ರದೇಶಗಳಲ್ಲಿಯೂ ಕೂಡ ವ್ಹೀಲಿಂಗ್ ಹುಚ್ಚಾಟದಿಂದ ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ. ಪೊಲೀಸರು ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಅವಶ್ಯಕತೆ ಇದೆ ಎಂದು ಒತ್ತಾಯಿಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News