PSI ನೇಮಕಾತಿ ಹಗರಣ: ಕೊನೆಗೂ ಪತ್ತೆಯಾಯ್ತು ಆರೋಪಿ ದಿವ್ಯಾ ಹಾಗರಗಿ ಮೊಬೈಲ್‌!

ಜ್ಞಾನಜ್ಯೋತಿ ಶಾಲೆಯ ಒಡತಿ ಹಾಗೂ ಬಿಜೆಪಿ ನಾಯಕಿಯಾಗಿರುವ ದಿವ್ಯಾಳನ್ನು ಮಹಾರಾಷ್ಟ್ರದ ಪುಣೆ ಬಳಿ ಸಿಐಡಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು ಅಕ್ರಮ ನಡೆದ ಸಂದರ್ಭದಲ್ಲಿ ದಿವ್ಯಾ ಹಾಗರಗಿ ಬಳಕೆ ಮಾಡುತ್ತಿದ್ದ ಮೊಬೈಲ್‌ ಫೋನ್‌ನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. 

Written by - Bhavishya Shetty | Last Updated : May 11, 2022, 03:08 PM IST
  • 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ
  • ಹಗರಣದ ರೂವಾರಿ ದಿವ್ಯಾ ಹಾಗರಗಿ ಮೊಬೈಲ್‌ ಪತ್ತೆ
  • ಪ್ರಕರಣದ ತನಿಖೆಗೆ ತಿರುವು ಸಿಕ್ಕಂತಾಗಿದೆ
PSI ನೇಮಕಾತಿ ಹಗರಣ: ಕೊನೆಗೂ ಪತ್ತೆಯಾಯ್ತು ಆರೋಪಿ ದಿವ್ಯಾ ಹಾಗರಗಿ ಮೊಬೈಲ್‌! title=
Divya Hagaragi

ಕಲಬುರಗಿ: 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಕೊನೆಗೂ ಸಿಐಡಿ ಅಧಿಕಾರಿಗಳು ಪ್ರಮುಖ ಆರೋಪಿ, ಹಗರಣದ ರೂವಾರಿ ದಿವ್ಯಾ ಹಾಗರಗಿಯನ್ನು ಬಂಧಿಸಿದ್ದರು. ಆದರೆ ಆಕೆಯ ಫೋನ್‌ಗಾಗಿ ಸಾಕಷ್ಟು ತನಿಖೆ ನಡೆಸಿದರೂ ಪತ್ತೆಯಾಗಿರಲಿಲ್ಲ. ಇದೀಗ ಅಂತಿಮವಾಗಿ ಆಕೆಯ ಫೋನ್‌ ಸಿಕ್ಕಿದ್ದು, ಪ್ರಕರಣದ ತನಿಖೆಗೆ ತಿರುವು ಸಿಕ್ಕಂತಾಗಿದೆ. 

ಇದನ್ನು ಓದಿ: PSI ನೇಮಕಾತಿ ಹಗರಣ: ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ

ಜ್ಞಾನಜ್ಯೋತಿ ಶಾಲೆಯ ಒಡತಿ ಹಾಗೂ ಬಿಜೆಪಿ ನಾಯಕಿಯಾಗಿರುವ ದಿವ್ಯಾಳನ್ನು ಮಹಾರಾಷ್ಟ್ರದ ಪುಣೆ ಬಳಿ ಸಿಐಡಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು ಅಕ್ರಮ ನಡೆದ ಸಂದರ್ಭದಲ್ಲಿ ದಿವ್ಯಾ ಹಾಗರಗಿ ಬಳಕೆ ಮಾಡುತ್ತಿದ್ದ ಮೊಬೈಲ್‌ ಫೋನ್‌ನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. 

ಪತ್ತೆಯಾದ ಮೊಬೈಲ್‌ನಲ್ಲಿ ಅಕ್ರಮಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿಗಳು ಸದ್ಯ ಸಿಐಡಿ ಅಧಿಕಾರಿಗಳಿಗೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ. 

ಇದನ್ನು ಓದಿ: Health Tips: ದೇಹದ ಬೊಜ್ಜು ಕಡಿಮೆ ಮಾಡಲು ಇಲ್ಲಿದೆ ಸುಲಭ ಉಪಾಯ

ಇನ್ನು ದಿವ್ಯಾ ಹಾಗರಗಿ ಜೊತೆ ಶಿಕ್ಷಕಿಯರಾದ ಅರ್ಚನಾ ಮತ್ತು ಸುನಂದಾ ಎಂಬವರನ್ನು ಸಹ ಬಂಧನ ಮಾಡಲಾಗಿದೆ. ಪುಣೆ ಬಳಿ ಹೋಟೆಲ್‌ವೊಂದರಲ್ಲಿ ಊಟ ಮಾಡುತ್ತಿರುವಾಗ ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಏ.28ರಂದು ಶಹಬಾದ್ ನಗರಸಭೆಯ ಜ್ಯೋತಿ ಪಾಟೀಲ್‌ರನ್ನು ಬಂಧಿಸಲಾಗಿತ್ತು. ಜ್ಯೋತಿ ಬಂಧನದ ನಂತರ ದಿವ್ಯಾ ಹಾಗರಗಿ ಕೂಡ ಲಾಕ್ ಆಗಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News