ಬೆಂಗಳೂರು: ರಾಜ್ಯಾದ್ಯಂತ ಇಂದು ಬೆಳಗಿನ ಜಾವ ಪಿಎಫ್ಐ ಮತ್ತು ಎಸ್ಡಿಪಿಐ ಕಾರ್ಯಕರ್ತರ ಮನೆ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿ 80ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಮುಚ್ಚಳಿಕೆಯನ್ನು ಬರೆಸಿಕೊಂಡಿದ್ದಾರೆ ಎಂದು ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಇಂದು ಬೆಳಗ್ಗೆ 3 ಗಂಟೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿಯನ್ನು ನಡೆಸಲಾಗಿತ್ತು. ಕೆಲದಿನಗಳ ಹಿಂದೆಯಷ್ಟೇ ಎನ್ಐಎ ಮತ್ತು ಇಡಿ ಏಕಕಾಲದಲ್ಲಿ ದೇಶಾದ್ಯಂತ ಪಿಎಫ್ಐ ಸಂಘಟನೆಯ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಹಲವು ಮಹತ್ವದ ದಾಖಲೆಗಳು ಪತ್ತೆಯಾಗಿದ್ದವು. ಎನ್ಐಎ ದಾಳಿಯ ವೇಳೆಯಲ್ಲಿ ಸಕ್ರಿಯವಾಗಿ ಕೆಲವು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ : ಧರ್ಮದ ಮುಖಂಡರ ಹತ್ಯೆಗೆ PFI ಟ್ರೈನಿಂಗ್? FIRನಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ.!
ಪಿಎಫ್ಐ ಜೊತೆ ನಿಕಟ ಸಂಪರ್ಕದಲ್ಲಿದ್ದ ಕೆಲವರನ್ನು ರಾಜ್ಯ ಪೊಲೀಸರು ಗುರುತಿಸಿದ್ದರು. ಅವರನ್ನೇ ಟಾರ್ಗೆಟ್ ಮಾಡಿ ಈ ದಾಳಿ ರಾಜ್ಯಪೊಲೀಸರು ನಡೆಸಲಾಗಿದೆ ಎಂದಿದ್ದಾರೆ. ವಶಕ್ಕೆ ಪಡೆದಿರುವ ಆರೋಪಿಗಳನ್ನು ಮುಂಜಾಗ್ರತಾ ಕ್ರಮವಾಗಿ ಆಯಾ ತಾಲೂಕು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುತ್ತೇವೆ. ಕಾನೂನು ಸುವ್ಯವಸ್ಥೆ ಧಕ್ಕೆ, ಕೋಮುಸೌಹಾರ್ಧಕ್ಕೆ ಹಾನಿ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಈ ದಾಳಿ ನಡೆಸಲಾಗಿದೆ.
ವಶಕ್ಕೆ ಪಡೆದುಕೊಂಡ ಎಲ್ಲಾ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಸೆಕ್ಷನ್ 107 ರಡಿ ಮುಚ್ಚಳಿಕೆ ಬರೆಸಲಾಗುವುದು. ಅಹಿತಕರ ಘಟನೆಯಲ್ಲಿ ಭಾಗಿಯಾಗಕೂಡದು, ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಬಾಂಡ್ ನಲ್ಲಿ ಬರೆಸಲಾಗುವುದು. 80 ಮಂದಿಯಲ್ಲಿ ಎಲ್ಲರೂ ಪಿಎಫ್ಐ ಹಾಗೂ ಎಸ್ ಡಿಪಿಐಯಲ್ಲಿ ಗುರುತಿಸಿಕೊಂಡಿದ್ದರು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ : ಪೊಲೀಸರ ರೇಡ್: ಚಾಮರಾಜನಗರದಲ್ಲಿ ಇಬ್ಬರು ಪಿಎಫ್ಐ ಮುಖಂಡರು ಅರೆಸ್ಟ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.