ನಟ ದರ್ಶನ್ ವಿರುದ್ಧ ಸಾಗರದಲ್ಲಿ ಪ್ರತಿಭಟನೆ: ಕಠಿಣ ಶಿಕ್ಷೆಗೆ ಆಗ್ರಹ

Protest Against Darshan: ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಕಿಡ್ನಾಪ್ ಮಾಡಿ  ಬೆಂಗಳೂರಿಗೆ ತಂದು ಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಈ ಕೊಲೆಗೆ ಸಂಬಂಧಪಟ್ಟಂತೆ ಚಿತ್ರನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. 

Written by - Yashaswini V | Last Updated : Jun 14, 2024, 02:43 PM IST
  • ಸಮಾಜದಲ್ಲಿ ಒಬ್ಬ ಹೆಸರಾಂತ ಚಿತ್ರನಟನಾಗಿ ಈ ರೀತಿಯ ಕೃತ್ಯ ಎಸಗಿರುವುದು ಅಕ್ಷಮ್ಯ
  • ಇಂತಹ ಘಟನೆಗಳು ಸಮಾಜದಲ್ಲಿ ನಡೆಯಬಾರದು
  • ಇವರಿಂದ ಪ್ರೇರಣೆ ಕೂಡ ಆಗಬಾರದು- ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸಾಗರ ತಾಲೂಕು ಘಟಕ
ನಟ ದರ್ಶನ್ ವಿರುದ್ಧ ಸಾಗರದಲ್ಲಿ ಪ್ರತಿಭಟನೆ: ಕಠಿಣ ಶಿಕ್ಷೆಗೆ ಆಗ್ರಹ  title=

Protest Against Darshan: ಚಿತ್ರದುರ್ಗದ ವಿ .ಆರ್ ಎಸ್ ಬಡಾವಣೆ ನಿವಾಸಿ ರೇಣುಕಾಸ್ವಾಮಿ ಕೊಲೆ ಖಂಡಿಸಿ  ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಾಗರ ತಾಲೂಕು (All India Veerashaiva Lingayat Mahasabha Sagar Taluk) ಘಟಕದ ವತಿಯಿಂದ  ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಯತೀಶ್ ಆರ್ ಮೂಲಕ ಕರ್ನಾಟಕ ಸರ್ಕಾರದ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಚಿತ್ರದುರ್ಗದ ರೇಣುಕಾ ಸ್ವಾಮಿ (Renukaswamy) ಅವರನ್ನು ಕಿಡ್ನಾಪ್ ಮಾಡಿ  ಬೆಂಗಳೂರಿಗೆ ತಂದು ಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಈ ಕೊಲೆಗೆ ಸಂಬಂಧಪಟ್ಟಂತೆ ಚಿತ್ರನಟ ದರ್ಶನ್ (Actor Darshan) ಮತ್ತು ಇತರೆ ಆರೋಪಿಗಳನ್ನು ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. 

ಇದನ್ನೂ ಓದಿ- ಇಂಜಿನಿಯರಿಂಗ್ ಓದಿರುವ ವಿಜಯಲಕ್ಷ್ಮೀ ಅವರಿಗೆ ನಟ ದರ್ಶನ್‌ಗೆ ಸಿಕ್ಕಿದ್ದು ಎಲ್ಲಿ? ಇವರ ಪ್ರೀತಿ ಶುರುವಾಗಿದ್ದು ಹೇಗೆ?

ಸಮಾಜದಲ್ಲಿ ಒಬ್ಬ ಹೆಸರಾಂತ ಚಿತ್ರನಟನಾಗಿ ಈ ರೀತಿಯ ಕೃತ್ಯ ಎಸಗಿರುವುದು ಅಕ್ಷಮ್ಯ ಮತ್ತು ಅವಮಾನೀಯವಾಗಿದೆ. ಇಂತಹ ಘಟನೆಗಳು ಸಮಾಜದಲ್ಲಿ ನಡೆಯಬಾರದು ಮತ್ತು ಇವರಿಂದ ಪ್ರೇರಣೆ ಕೂಡ ಆಗಬಾರದು. ಈ ಕೃತ್ಯದಲ್ಲಿ ಭಾಗವಹಿಸಿರುವ ಎಲ್ಲಾ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿ ಕ್ರೂರಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸಾಗರ ತಾಲೂಕು ಘಟಕ  ಆಗ್ರಹ ಮಾಡಿದೆ.

ಇದನ್ನೂ ಓದಿ- ನಟ ದರ್ಶನ್ ವಿರುದ್ಧ ಮತ್ತೊಂದು ಆರೋಪ: ಹತ್ತು ವರ್ಷಗಳ ಹಿಂದಿನ ಕರಾಳ ಕಥೆ ಇದೀಗ ಬಯಲು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News