Bangalore : ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ, ನಾಲ್ವರು ಪೊಲೀಸ್‌ ವಶಕ್ಕೆ

Bangalore news : ಬೆಂಗಳೂರಿನಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Written by - VISHWANATH HARIHARA | Edited by - Chetana Devarmani | Last Updated : Oct 8, 2022, 12:53 PM IST
  • ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ
  • ನಾಲ್ವರು ಯುವಕರು ಪೊಲೀಸ್‌ ವಶಕ್ಕೆ
  • ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು
Bangalore : ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ, ನಾಲ್ವರು ಪೊಲೀಸ್‌ ವಶಕ್ಕೆ title=
ಬಾಲಕಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 17 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಪ್ರಸಂಗ ಬೆಳಕಿಗೆ ಬಂದಿದೆ. ಬಾಲಕಿ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಬಾಲಕಿ ಪೋಷಕರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಇದನ್ನೂ ಓದಿ : ಟಿಪ್ಪು, ತಾಳಗುಪ್ಪ ರೈಲುಗಳಿಗೆ ಒಡೆಯರ್, ಕುವೆಂಪು ಎಕ್ಸಪ್ರೆಸ್ ಎಂದು ಮರುನಾಮಕರಣ

ಬಾಲಕಿಗೆ ಪರಿಚಯವಿರುವ ಯುವಕರೇ ಲೈಂಗಿಕ ಕಿರುಕುಳ ನೀಡಿದ್ದು, ಬೇರೆ ಬೇರೆ ಸಮಯದಲ್ಲಿ  ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿ ಪೋಷಕರು ದೂರಿದ್ದಾರೆ. ಇನ್ನೂ ಆರೋಪಿತರು ಬಾಲಕಿಯ ಕೆಲ ಖಾಸಗಿ ಫೋಟೋ ಹಾಗೂ ವಿಡಿಯೋ ಇಟ್ಟುಕೊಂಡು ಬೆದರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ಸದ್ಯ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳಾದ ದೇವರಾಜ, ಶೇಖರ್, ಬಸವ, ಭೈರ ಎಂಬ ನಾಲ್ವರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : PFI ಜೊತೆ ಪೊಲೀಸರ ನಂಟು.? ರಾಜ್ಯದ‌ ಮೇಲೂ NIA ಕಣ್ಣು.!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News