ಉಡುಪಿ: ವೇಗದಿಂದ ಬಂದ ಆಂಬ್ಯುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ.
ಇದನ್ನೂ ಓದಿ: ಕೂಲಿ ಕಾರ್ಮಿಕರು ತಂಗಿದ್ದ ಶೆಡ್ ಕುಸಿದು ನಾಲ್ವರ ದುರ್ಮರಣ
ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಯನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದೆ. ಆಂಬ್ಯುಲೆನ್ಸ್ ಚಾಲಕನ ಅತೀವೇಗ ಮತ್ತು ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ಆರೋಪಿಸಲಾಗುತ್ತಿದೆ.
ಅಪಘಾತದಲ್ಲಿ ಆಂಬ್ಯುಲೆನ್ಸ್ನಲ್ಲಿದ್ದ ರೋಗಿ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಈ ಕುರಿತು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ನಕಲಿ ನಾಟಿ ಮೊಟ್ಟೆ ಮಾರಾಟ ದಂಧೆ : ಕಣ್ಮುಚ್ಚಿ ಕುಳಿತಿದೆಯಾ ಪೊಲೀಸ್ ಇಲಾಖೆ..!
ಇಲ್ಲಿದೆ ನೋಡಿ ಭೀಕರ ಅಪಘಾತದ ವಿಡಿಯೋ:
Ambulance became death in Karnataka #Karnataka #AmbulanceCrash #India #Banglore #hospital #accidentally pic.twitter.com/YwEIX47VuK
— younas k koroth (@Art34203225) July 21, 2022
CCTV footage of speeding ambulance coll!ding with toll gate in Udupi, #Karnataka#OnlineGurukul #TeJran #APHopeCBN#thursdayvibes#ThursdayThoughts pic.twitter.com/YyqHLfl2WB
— ®️Rahul Attari 🇮🇳 (@AttariRahul) July 21, 2022
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.