ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಮತ್ತೊಬ್ಬ ಮಹಿಳೆಮೇಲೆ ಆ್ಯಸಿಡ್ ದಾಳಿ ನಡೆದಿದೆ. ಬೆಂಗಳೂರಿನ ಸಾರಕ್ಕಿ ಬಳಿ ಘಟನೆ ನಡೆದಿದ್ದು, ಮಹಿಳೆಯ ಪರಿಚಯಸ್ಥನಿಂದಲೇ ಈ ಕೃತ್ಯ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಅಹ್ಮದ್ ಎಂಬಾತ ಆ್ಯಸಿಡ್ ದಾಳಿ ನಡೆಸಿರುವ ಆರೋಪಿ. ಈತ ವಿವಾಹಿತ ಮಹಿಳೆಯನ್ನ ಪ್ರೀತಿಸುತ್ತಿದ್ದ. ತನ್ನನ್ನು ಮದುವೆಯಾಗುವಂತೆ ದುಂಬಾಲು ಬಿದ್ದಿದ್ದ. ಈ ವೇಳೆ ಮದುವೆಯಾಗಲು ಒಪ್ಪದಿದ್ದಾಗ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆ್ಯಸಿಡ್ ದಾಳಿಯಿಂದ ಮಹಿಳೆ ಬಲಗಣ್ಣಿಗೆ ಗಂಭೀರ ಗಾಯವಾಗಿದ್ದು, ಗಾಯಾಳು ಮಹಿಳೆಯನ್ನ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ- ಲವ್ ಮಾಡಲ್ಲ ಎಂದ ಯುವತಿ ಮೇಲೆ ಆಸಿಡ್ ಎರಚಿದ ಪಾಗಲ್ ಪ್ರೇಮಿ
ಆರೋಪಿ ಮತ್ತು ನೊಂದ ಮಹಿಳೆ ಇಬ್ಬರೂ ಅಗರಬತ್ತಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಸಂತ್ರಸ್ತ ಮಹಿಳೆಗೆ ಮದುವೆ ಆಗಿ 3 ಮಕ್ಕಳಿದ್ದಾರೆ. ಹೀಗಿದ್ದರೂ ಆರೋಪಿ ಮಹಿಳೆಯನ್ನು ಪ್ರೀತಿಸುತ್ತಿದ್ದ. ಜೊತೆಗೆ ಮದುವೆ ಆಗುವಂತೆ ಪೀಡಿಸುತ್ತಿದ್ದ ಎಂದು ತಿಳಿದುಬಂದಿದೆ.
ಇದನ್ನೂ ಓದಿ- ಹುಡುಗಿ ಮನೆಯವರು ಒಪ್ಪಿದ್ರೆ ಮದುವೆ ಆಗ್ತಿನಿ: ಆ್ಯಸಿಡ್ ನಾಗ
ಗೋರಿಪಾಳ್ಯದ ನಿವಾಸಿಯಾಗಿರುವ ಆರೋಪಿ ಅಹ್ಮದ್, ಮಹಿಳೆ ಕೆಎಸ್ ಲೇಔಟ್ನಿಂದ ಜೆಪಿ ನಗರ ಕಡೆಗೆ ತೆರಳುತಿದ್ದಾಗ ಈ ಕೃತ್ಯ ಎಸಗಿದ್ದಾನೆ. ಸದ್ಯ ಆರೋಪಿಯನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.