ಉಡುಪಿ: ಕೊಲ್ಲೂರು ಸಮೀಪದ ಅರಿಶಿನಗುಂಡಿ ಜಲಪಾತದಲ್ಲಿ ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದ ಶರತ್ ಕುಮಾರ್(23) ಮೃತದೇಹ ಪತ್ತೆಯಾಗಿದೆ. ಸತತ 1 ವಾರಗಳ ನಿರಂತರ ಶೋಧ ಕಾರ್ಯದ ಬಳಿಕ ಭಾನುವಾರ ಯುವಕನ ಮೃತದೇಹ ಪತ್ತೆಯಾಗಿದೆ.
ಭದ್ರಾವತಿ ಮೂಲದ ಯುವಕ ಶರತ್ ಕುಮಾರ್ ತನ್ನ ಸ್ನೇಹಿತನೊಂದಿಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಅರಿಶಿನಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ. ಈ ವೇಳೆ ತುಂಬಿ ಹರಿಯುತ್ತಿದ್ದ ನದಿ ಬಳಿ ನಿಂತು ರೀಲ್ಸ್ ಮಾಡಲು ಹೋಗಿದ್ದ ಆತ ಕಾಲು ಜಾರಿ ಬಿದ್ದು ಕೊಚ್ಚಿಕೊಂಡು ಹೋಗಿದ್ದ.
ಇದನ್ನೂ ಓದಿ: KPSC Recruitment 2023: ಕೆಪಿಎಸ್ಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶರತ್ ಕುಮಾರ್ ಕಾಲು ಜಾರಿ ನದಿಯಲ್ಲಿ ಬೀಳುತ್ತಿರುವ ದೃಶ್ಯವು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ತಮ್ತು ಪೊಲೀಸ್ ಸಿಬ್ಬಂದಿ ಶರತ್ ಕುಮಾರ್ಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದರು.
ಮೃತದೇಹ ಪತ್ತೆಹಚ್ಚಲು ಮುಳುಗು ತಜ್ಞರು, ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಹಗಲು ರಾತ್ರಿ ಎನ್ನದೇ ಶೋಧ ಕಾರ್ಯಾಚರಣೆ ನಡೆಸಿದ್ದರು. ನಿರಂತರ ಶೋಧ ಕಾರ್ಯದ ಬಳಿಕ ಮೃತದೇಹ ಪತ್ತೆಯಾಗಿದೆ. ಶರತ್ ಕುಮಾರ್ ಮೃತದೇಹವು 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗೆ ಸಿಲುಕಿತ್ತು ಎಂದು ತಿಳಿದುಬಂದಿದೆ.
ಇದನ್ನೂ ಓದಿ: Kalaburgi: ಸಚಿವರು ತಮ್ಮ ವರ್ತನೆ ಸರಿಪಡಿಸಿಕೊಳ್ಳದಿದ್ದರೆ ನಮ್ಮ ಹೋರಾಟ ಮುಂದುವರೆಯಲಿದೆ - ಶಾಸಕ ಬಿ.ಆರ್.ಪಾಟೀಲ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.