ಸಿಗರೇಟ್ ಹಣ ಕೇಳಿದಕ್ಕೆ ಹಲ್ಲೆ : ಮೂವರು ಪುಡಿ ರೌಡಿಗಳ ಬಂಧನ

ಸಿಗರೇಟ್ ಹಣ ಕೇಳಿದಕ್ಕೆ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ ಪ್ರಾಣಬೆದರಿಕೆ ಹಾಕಿದ್ದ ಸಂಬಂಧ ಮೂವರು ಆರೋಪಿಗಳನ್ನು ಎಚ್ ಎಎಲ್‌ ಪೊಲೀಸರು ಬಂಧಿಸಿದ್ದಾರೆ. ಡೆಲಿವರಿ ಬಾಯ್ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್(20) ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವೈಟ್‌ಫೀಲ್ಡ್ ಡಿಸಿಪಿ ಗಿರೀಶ್ ಮಾಹಿತಿ ನೀಡಿದ್ದಾರೆ.

Written by - VISHWANATH HARIHARA | Edited by - Krishna N K | Last Updated : Dec 10, 2022, 12:30 PM IST
  • ಸಿಗರೇಟ್ ಹಣ ಕೇಳಿದಕ್ಕೆ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ
  • 1.90 ಲಕ್ಷ ರೂ. ಎಗರಿಸಿ ಪ್ರಾಣಬೆದರಿಕೆ ಹಾಕಿದ್ದ ಸಂಬಂಧ ಮೂವರು ಆರೋಪಿಗಳು
  • ಮೂವರು ಆರೋಪಿಗಳನ್ನು ಬಂಧಿಸಿದ ಎಚ್‌ಎಎಲ್‌ ಪೊಲೀಸರು
ಸಿಗರೇಟ್ ಹಣ ಕೇಳಿದಕ್ಕೆ ಹಲ್ಲೆ : ಮೂವರು ಪುಡಿ ರೌಡಿಗಳ ಬಂಧನ title=

ಬೆಂಗಳೂರು : ಸಿಗರೇಟ್ ಹಣ ಕೇಳಿದಕ್ಕೆ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ ಪ್ರಾಣಬೆದರಿಕೆ ಹಾಕಿದ್ದ ಸಂಬಂಧ ಮೂವರು ಆರೋಪಿಗಳನ್ನು ಎಚ್ ಎಎಲ್‌ ಪೊಲೀಸರು ಬಂಧಿಸಿದ್ದಾರೆ. ಡೆಲಿವರಿ ಬಾಯ್ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್(20) ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವೈಟ್‌ಫೀಲ್ಡ್ ಡಿಸಿಪಿ ಗಿರೀಶ್ ಮಾಹಿತಿ ನೀಡಿದ್ದಾರೆ.

ಉಡುಪಿಯ ಬೈಂದೂರು ಮೂಲದ ನವೀನ್ ಕುಮಾರ್ ಹಾಗೂ ಪ್ರಜ್ವಲ್ ಶೆಟ್ಟಿ, ನಿತೀನ್ ಶೆಟ್ಟಿ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಈ ಘಟನೆ ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಡಿ.9ರಾತ್ರಿ 11.30 ರ ಸಮಯದಲ್ಲಿ ಏಳೆಂಟು ಜನರ ರೌಡಿಗಳ ಗುಂಪು ಕುಂದಲಹಳ್ಳಿ ಗೇಟ್ ಬಳಿಯಿರುವ ಬ್ರಹ್ಮಲಿಂಗೇಶ್ವರ ಬೇಕರಿಗೆ ಟೀ ಕುಡಿಯಲು ಮತ್ತು ಸಿಗರೇಟ್ ಸೇದಲು ಹೋಗಿದ್ದಾರೆ. ಬೇಕರಿಯವರು ಸಿಗರೇಟ್ ನೀಡಿ ಹಣ ಕೇಳಿದ್ದಾರೆ. ಹಣ ಕೇಳಿದ್ದಕ್ಕೆ ಬೇಕರಿ ಹುಡುಗರಿಗೆ ಪುಡಿ ರೌಡಿಗಳು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಾ, ಮನಸೋ ಇಚ್ಚೆ ಹಿಗ್ಗಾಮುಗ್ಗಾ ಥಳಿಸಿ ಹಣ ತೆಗೆದುಕೊಂಡು ಪರಾರಿಯಾಗಿದ್ದರು. ಹಲ್ಲೆಗೊಳಗಾದವರು ಎಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ: Cyclone Mandous Effect: ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ!

ದೂರಿನಲ್ಲಿ ಏನಿತ್ತು..? : ಗುರುವಾರ ರಾತ್ರಿ 11.30ರ ಸಮಯದಲ್ಲಿ 7 ರಿಂದ 8 ಅಪರಿಚಿತರು ಟೀ ಕೇಳಿದ್ದು, ಅವರಿಗೆ ಕುಡಿಯಲು ಟೀ ಕೊಟ್ಟಿದ್ದು, ನಂತರ ಬೇಕೆಂದೇ ಕಿರಿಕಿರಿ ತೆಗೆದು ಹಣ ಕೊಡುವ ವಿಷಯದಲ್ಲಿ ತಗಾದೆ ತೆಗೆದು ಏಕಾಏಕಿ ಇಬ್ಬರೂ ಅಪರಿಚಿತರು ಅಂಗಡಿ ಒಳಗೆ ಬಂದು ಮನಬಂದಂತೆ ಪ್ಲಾಸ್ಟಿಕ್ ಕ್ರೇಟ್ ಮತ್ತು ಹೆಲ್ಮೆಟ್ ಹಾಗೂ ಮುಷ್ಠಿಯಿಂದ ಅಲ್ಲದೇ ನಮ್ಮ ಅಂಗಡಿಯಲ್ಲಿ ರಾಡ್‌ನಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ನಂತರ ಪ್ರಜ್ವಲ್‌ಶೆಟ್ಟಿ, ನಿತೀನ್ ಶೆಟ್ಟಿ ಅವರ ಮೇಲೆಯೂ ಹಲ್ಲೆ ನಡೆಸಿ ಕಾಲಿನಿಂದ ತುಳಿದಿದ್ದಾರೆ. ಅಲ್ಲದೇ ಈ ಸಂದರ್ಭದಲ್ಲಿ ನನ್ನ ಕುತ್ತಿಗೆಯಲ್ಲಿದ್ದ 18 ಗ್ರಾಂ ತೂಕದ ಚಿನ್ನದ ಸರ, 25 ಸಾವಿರ ರೂ. ಬೆಲೆ ಬಾಳುವ ಚೈನ್ ತೆಗೆದುಕೊಂಡು ಹೋಗಿದ್ದಾರೆ. 

ಕಾಂಡಿಮೆಂಟ್ಸ್ ವಸ್ತುಗಳನ್ನು ಹಾಗೂ ಗ್ಲಾಸ್‌ಗಳನ್ನು ಒಡೆದು ಚೆಲ್ಲಾಪಿಲ್ಲಿ ಮಾಡಿ, ಕ್ಯಾಷ್ ಬಾಕ್ಸ್‌ನಲ್ಲಿ 1.90 ಲಕ್ಷ ರೂ. ಹಣವನ್ನು ತೆಗೆದುಕೊಂಡು ಹೋಗಿದ್ದಾರೆ. ಹೋಗುವಾಗ ಪೊಲೀಸ್‌ಗೆ ಏನಾದರೂ ದೂರು ನೀಡಿದರೆ ನಿಮ್ಮನ್ನು ಪ್ರಾಣ ಸಹಿತ ಬಿಡುವುದಿಲ್ಲ. ನಿಮ್ಮನ್ನು ಕೊಲೆ ಮಾಡುತ್ತೇವೆ. ತಕ್ಷಣ ಊರು ಬಿಟ್ಟು ಹೋಗಬೇಕು. ಇಲ್ಲವಾದಲ್ಲಿ ನಿಮ್ಮನ್ನು ಸಾಯಿಸುತ್ತೇವೆ ಎಂದು ಪ್ರಾಣ ಬೆದರಿಕೆ ಹಾಕಿ ಹೋಗಿದ್ದಾರೆ ಎಂದು ಹಲ್ಲೆಗೊಳಗಾದ ನವೀನ್ ಕುಮಾರ್ ಎಚ್‌ಎಎಲ್ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದರು. ಇವರ ಮೇಲಿನ ಹಲ್ಲೆ ವಿಡಿಯೋ ಸಾಕಷ್ಟು ವೈರಲ್ ಸಹ ಆಗಿ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News