ಸಾವಿಗೂ ಮುನ್ನ ರಾಷ್ಟ್ರಪತಿ, ಸಿಜೆಐಗೆ ಮೇಲ್ ಮಾಡಿದ್ದ ಅತುಲ್..!

ಯೆಸ್ ಮಾರತ್ ಹಳ್ಳಿಯಲ್ಲಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಬೇರೆ ಬೇರೆ ತಿರುವು ಪಡೆದುಕೊಂಡಿದೆ. ಪೊಲೀಸರ ತನಿಖೆ ವೇಳೆ ಅತುಲ್ ಸುಭಾಶ್ ಸಾವಿಗೂ ಮುನ್ನ ರಾಷ್ಟ್ರಪತಿ ಹಾಗೂ ಸುಪ್ರೀಂ ಕೋರ್ಟ್ ಜಡ್ಜ್ ಗೆ ಮೇಲ್ ಮಾಡಿ ತನಗಾಗಿರುವ ನೋವು, ಅನ್ಯಾಯವನ್ನು ಹೇಳಿಕೊಂಡಿದ್ದಾನೆ.

Written by - VISHWANATH HARIHARA | Edited by - Manjunath N | Last Updated : Dec 12, 2024, 11:54 PM IST
  • ಹೌದು ನೇಣು ಬಿಗಿದುಕೊಳ್ಳುವ ಎರಡು ನಿಮಿಷಗಳ ಮುಂಚೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ, ಸುಪ್ರೀಂ ಕೋರ್ಟ್ ಜಡ್ಜ್ ಗೆ ಮೇಲ್ ಮಾಡಿದ್ದಾನೆ.
  • ಡಿಸೆಂಬರ್ 9ರಂದು ರಾತ್ರಿ 1 ಗಂಟೆ 31 ನಿಮಿಷದ ವೇಳೆಗೆ ʻನಿಮ್ಮ ಕೈಯಲ್ಲಿ ದೊಡ್ಡ ಅಧಿಕಾರ ಇದೆ.
  • ಮನಸ್ಸು ಮಾಡಿದ್ರೆ ದೇಶದಲ್ಲಿ ಬದಲಾವಣೆ ತರ್ಬೋದು, ಅಸಮರ್ಥ ಮತ್ತು ಪಕ್ಷಪಾತಿ ನ್ಯಾಯಾಧೀಶರನ್ನು ವಜಾಗೊಳಿಸಬೇಕು ಎಂದು ಬರೆದು ಮೇಲ್‌ ಕಳುಹಿಸಿದ್ದಾನೆ.
ಸಾವಿಗೂ ಮುನ್ನ ರಾಷ್ಟ್ರಪತಿ, ಸಿಜೆಐಗೆ ಮೇಲ್ ಮಾಡಿದ್ದ ಅತುಲ್..! title=

ಅತುಲ್ ಸಿದ್ದಾರ್ಥ್, ಈ ಹೆಸರು ಸದ್ಯ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗ್ತಿದೆ. ಸಾವಿಗೂ ಮುನ್ನ ಅತುಲ್ ವಿಡಿಯೋ ಮಾಡಿ ಡೆತ್ ನೋಟ್ ಬರೆದಿಟ್ಟಿದ್ದು ಗೊತ್ತಾಗಿತ್ತು. ಆದ್ರೆ ಅತುಲ್ ರಾಷ್ಟ್ರಪತಿ, ಸುಪ್ರೀಂ ಕೋರ್ಟ್ ಗೆ ಮೇಲ್ ಮಾಡಿ ತನ್ನ ನೋವಿನ ಬಗ್ಗೆ ಹೇಳಿಕೊಂಡಿದ್ದಾನೆ. ಹಾಗಾದ್ರೆ ಆ ಮೇಲ್ ನಲ್ಲಿ ಏನೆಲ್ಲಾ ಇದೆ. ಆತ್ಮಹತ್ಯೆ ಕೇಸಲ್ಲಿ ಪೊಲೀಸರ ತನಿಖೆ ಹೇಗ್ ಆಗ್ತಿದೆ ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.

ಸುಳ್ಳು ಕೇಸ್ ದಾಖಲಿಸಿ ಅನ್ಯಾಯ ಮಾಡಿದ್ದಾರೆ ಅಂತಾ ಅಳಲು:

ಯೆಸ್ ಮಾರತ್ ಹಳ್ಳಿಯಲ್ಲಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಬೇರೆ ಬೇರೆ ತಿರುವು ಪಡೆದುಕೊಂಡಿದೆ. ಪೊಲೀಸರ ತನಿಖೆ ವೇಳೆ ಅತುಲ್ ಸುಭಾಶ್ ಸಾವಿಗೂ ಮುನ್ನ ರಾಷ್ಟ್ರಪತಿ ಹಾಗೂ ಸುಪ್ರೀಂ ಕೋರ್ಟ್ ಜಡ್ಜ್ ಗೆ ಮೇಲ್ ಮಾಡಿ ತನಗಾಗಿರುವ ನೋವು, ಅನ್ಯಾಯವನ್ನು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ- ಚಾಣಕ್ಯನ ಪ್ರಕಾರ ಗಂಡ-ಹೆಂಡತಿಯರ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು? ಏಕಿರಬೇಕು?

ಹೌದು ನೇಣು ಬಿಗಿದುಕೊಳ್ಳುವ ಎರಡು ನಿಮಿಷಗಳ ಮುಂಚೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ, ಸುಪ್ರೀಂ ಕೋರ್ಟ್ ಜಡ್ಜ್ ಗೆ ಮೇಲ್ ಮಾಡಿದ್ದಾನೆ.ಡಿಸೆಂಬರ್ 9ರಂದು ರಾತ್ರಿ 1 ಗಂಟೆ 31 ನಿಮಿಷದ ವೇಳೆಗೆ ʻನಿಮ್ಮ ಕೈಯಲ್ಲಿ ದೊಡ್ಡ ಅಧಿಕಾರ ಇದೆ. ಮನಸ್ಸು ಮಾಡಿದ್ರೆ ದೇಶದಲ್ಲಿ ಬದಲಾವಣೆ ತರ್ಬೋದು, ಅಸಮರ್ಥ ಮತ್ತು ಪಕ್ಷಪಾತಿ ನ್ಯಾಯಾಧೀಶರನ್ನು ವಜಾಗೊಳಿಸಬೇಕು ಎಂದು ಬರೆದು ಮೇಲ್‌ ಕಳುಹಿಸಿದ್ದಾನೆ. ಅಲ್ಲದೇ ತನ್ನ ಮೇಲೆ ಸುಳ್ಳು ಕೇಸ್, ಸೆಕ್ಷನ್‌ಗಳನ್ನ ಹಾಕಿದ್ದಾರೆಂದು ಎಂದು ಮೇಲ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದೇ ರೀತಿಯ ಇ-ಮೇಲ್‌ವೊಂದನ್ನು ಸುಪ್ರೀಂ ಕೋರ್ಟ್ ಜಡ್ಜ್‌ಗೂ ಕಳುಹಿಸಿದ್ದಾರೆ ತನಗೆ ಆಗಿರುವ ಅನ್ಯಾಯದ ಬಗ್ಗೆ ಮೇಲ್ ಮಾಡಿದ್ದಾನೆ.

ಇನ್ನೂ ಅತುಲ್ ಆತ್ಮಹತ್ಯೆ ಪ್ರಕರಣ ರಾಷ್ಟ್ರದಲ್ಲಿ ದೊಡ್ಡ ಸದ್ದು ಮಾಡುತ್ತಿದ್ದು, ಸಂಸದೆ ಕಂಗನಾ ರಣಾವತ್ ಸಹ ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖಾಧಿಕಾರಿ ಜ್ಞಾನದೇವಾ ನೇತೃತ್ವದಲ್ಲಿ ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News