Belagavi: ವಿಷ ಸೇವಿಸಿದ ಪತಿ, ಮಗು ಕೊಂದು ನೇಣಿಗೆ ಶರಣಾದ ಪತ್ನಿ!

 ಕೌಟುಂಬಿಕ ಕಲಹದ ಹಿನ್ನೆಲೆ ಪತಿ, ಪತ್ನಿ ಹಾಗೂ ಮಗು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.  

Written by - Zee Kannada News Desk | Last Updated : Oct 22, 2022, 12:38 PM IST
  • ಕೌಟುಂಬಿಕ ಕಲಹಕ್ಕೆ ಪತಿ, ಪತ್ನಿ ಹಾಗೂ ಮಗು ಬಲಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ
  • ಮದ್ಯದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ ವಿಷ ಸೇವಿಸಿದ್ದ ಪತಿ ಚಿಕಿತ್ಸೆ ಫಲಿಸದೆ ಸಾವು
  • ಮನನೊಂದ ಒಂದೂವರೆ ವರ್ಷದ ಮಗುವಿನ ಕತ್ತು ಹಿಸುಕಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ
Belagavi: ವಿಷ ಸೇವಿಸಿದ ಪತಿ, ಮಗು ಕೊಂದು ನೇಣಿಗೆ ಶರಣಾದ ಪತ್ನಿ! title=
ಮದ್ಯದ ಅಮಲಿಗೆ ಕುಟುಂಬವೇ ಸರ್ವನಾಶ!

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಪತಿ, ಪತ್ನಿ ಹಾಗೂ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಈ  ಘಟನೆ ನಡೆದಿದೆ.

ಇದನ್ನೂ ಓದಿ: ಪ್ರೀತಿಗಾಗಿ ವಿದ್ಯಾರ್ಥಿನಿಯರ ನಡುವೆ ಫೈಟ್ ; ಬ್ಲೇಡ್​ನಿಂದ ಕತ್ತು ಕೊಯ್ದ ಗೆಳತಿ!

ಹೊಳೆಪ್ಪ ಮಾರುತಿ ಮಸ್ತಿ (25), ಪತ್ನಿ ವಾಸಂತಿ (22) ಹಾಗೂ ದಂಪತಿಯ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ. ಮದ್ಯದ ಅಮಲಿನಲ್ಲಿ ಹೊಳೆಪ್ಪ ಗುರುವಾರ ಪತ್ನಿಯೊಂದಿಗೆ ಜಗಳವಾಡಿದ್ದ‌. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸುವ ಉದ್ದೇಶದಿಂದ ವಿಷ ಕುಡಿದಿದ್ದ.ತಕ್ಷಣವೇ ಸ್ನೇಹಿತರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಇದನ್ನೂ ಓದಿ: ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು: ಸಿದ್ದರಾಮಯ್ಯ

ಆದರೆ ಚಿಕಿತ್ಸೆಗೆ ಸ್ಪಂದಿಸದೇ ಹೊಳೆಪ್ಪ ಮಾರುತಿ ಶುಕ್ರವಾರ ಕೊನೆಯುಸಿರೆಳೆದಿದ್ದಾನೆ. ಇದರಿಂದ ಮನನೊಂದ ಪತ್ನಿ ವಾಸಂತಿ ಕೂಡ ತಮ್ಮ ಒಂದೂವರೆ ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಬೆಳಗಾವಿಯ ಕಾಕತಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News