ನವದೆಹಲಿ ರೈಲು ನಿಲ್ದಾಣ: ವಿದ್ಯುತ್ ಸ್ಪರ್ಶದಿಂದ ಮಹಿಳೆ ಸಾವು, ಇಬ್ಬರು ಮಕ್ಕಳು ಪಾರು!

ಹೊಸದೆಹಲಿಯ ರೈಲು ನಿಲ್ದಾಣದಲ್ಲಿ ದುರಂತ: ಭಾನುವಾರ ಬೆಳಗ್ಗೆ ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ನವದೆಹಲಿ ರೈಲು ನಿಲ್ದಾಣದಲ್ಲಿ ನೀರಿನಲ್ಲಿ ಕರೆಂಟ್ ಬರುತ್ತಿದೆ ಎಂದು ಹೇಳಲಾಗುತ್ತಿದೆ. ಇದರಿಂದ ವಿದ್ಯುತ್ ಸ್ಪರ್ಶಿಸಿ ಸಾಕ್ಷಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.  

Written by - Puttaraj K Alur | Last Updated : Jun 25, 2023, 01:12 PM IST
  • ರಾಷ್ಟ್ರ ರಾಜಧಾನಿ ನವದೆಹಲಿ ರೈಲು ನಿಲ್ದಾಣದಲ್ಲಿ ದುರಂತವೊಂದು ಸಂಭವಿಸಿದೆ
  • ರೈಲು ನಿಲ್ದಾಣದ ಆವರಣದಲ್ಲಿ ವಿದ್ಯುತ್ ಸ್ಪರ್ಶದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ
  • ರೈಲ್ವೆ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು
ನವದೆಹಲಿ ರೈಲು ನಿಲ್ದಾಣ: ವಿದ್ಯುತ್ ಸ್ಪರ್ಶದಿಂದ ಮಹಿಳೆ ಸಾವು, ಇಬ್ಬರು ಮಕ್ಕಳು ಪಾರು! title=
ವಿದ್ಯುತ್ ಸ್ಪರ್ಶದಿಂದ ಮಹಿಳೆ ಸಾವು..!

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ರೈಲು ನಿಲ್ದಾಣದಲ್ಲಿ ದುರಂತವೊಂದು ಸಂಭವಿಸಿದೆ. ರೈಲು ನಿಲ್ದಾಣದ ಆವರಣದಲ್ಲಿ ವಿದ್ಯುತ್ ಸ್ಪರ್ಶದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಸಾಕ್ಷಿ ಅಹುಜಾ ಎಂದು ಗುರುತಿಸಲಾಗಿದೆ. ನಿಲ್ದಾಣದ ಆವರಣದಲ್ಲಿ ನೀರು ನಿಂತಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ವಿದ್ಯುತ್ ಸ್ಪರ್ಶದಿಂದ ಸಾಕ್ಷಿ ಅಹುಜಾ ಸಾವನ್ನಪ್ಪಲು ರೈಲ್ವೆ ನಿಲ್ದಾಣದ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಫೋರೆನ್ಸಿಕ್ ತಂಡ ಪರಿಶೀಲನೆ ನಡೆಸಿದೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಲೇಡಿ ಹಾರ್ಡಿಂಜ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Kashi Vishwanath: ಮತ್ತಷ್ಟು ದುಬಾರಿಯಾಯ್ತು ಕಾಶಿ ವಿಶ್ವನಾಥನ ದರ್ಶನ, ಬೆಲೆ ಎಷ್ಟು ಗೊತ್ತಾ?

ರೈಲ್ವೆ ಮತ್ತು ದೆಹಲಿ ಪೊಲೀಸ್ ಅಧಿಕಾರಿಗಳು ಈ ಭೀಕರ ಅಪಘಾತದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ನವದೆಹಲಿ ರೈಲು ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನೀರಿನಲ್ಲಿ ವಿದ್ಯುತ್ ಸ್ಪರ್ಶದಿಂದ ಈ ಅಪಘಾತ ಸಂಭವಿಸಿದೆ. ಮಹಿಳೆ ತನ್ನ ಪತಿ ಮತ್ತು ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗುತ್ತಿದ್ದಳು. ಆದರೆ ವಿದ್ಯುತ್ ಸ್ಪರ್ಶದಿಂದ ಆಕೆ ಸಾವನ್ನಪ್ಪಿದ್ದಾಳೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ಅಪಘಾತದಲ್ಲಿ ಸಾಕ್ಷಿ ಅವರ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ಸಾಕ್ಷಿ ‘ವಂದೇ ಭಾರತ್’ ರೈಲಿನಲ್ಲಿ ಹೋಗಬೇಕಿತ್ತು. ಆದರೆ ಅವಘಡ ಸಂಭವಿಸಿ ಅವರು ಪ್ರಾಣಬಿಟ್ಟಿದ್ದಾರೆ.

ಇದನ್ನೂ ಓದಿ: 25 ಜೂನ್ 1975.. ಇಂದಿಗೆ 48 ವರ್ಷದ ಹಿಂದೆ ನಿಜವಾಗಿ ನಡೆದಿದ್ದೇನು? ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದೇಕೆ?

ಸಾಕ್ಷಿ ಸಾವಿಗೆ ಯಾರು ಹೊಣೆ?

ಸಾಕ್ಷಿ ಸಾವಿಗೆ ಯಾರು ಹೊಣೆ ಎಂಬ ಪ್ರಶ್ನೆ ಇದೀಗ ಎದ್ದಿದೆ. ಈ ಘಟನೆಯ ಬಗ್ಗೆ ಸಾಕ್ಷಿ ಕುಟುಂಬ ಸದಸ್ಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಅಪಘಾತಕ್ಕೆ ರೈಲ್ವೆ ಇಲಾಖೆಯೇ ಹೊಣೆ ಎಂದು ಸಾಕ್ಷಿ ತಂದೆ ಹೇಳಿದ್ದಾರೆ. ಈ ದುರ್ಘಟನೆಯಲ್ಲಿ ಸಾಕ್ಷಿ ಅಹುಜಾ ಅವರ ಮಕ್ಕಳಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಜಾಗದಲ್ಲಿ ಮಾತ್ರ ಕರೆಂಟ್ ಬಿದ್ದಿಲ್ಲ, ಹೊಸದೆಹಲಿಯ ನಿಲ್ದಾಣದ ಆವರಣದಲ್ಲಿ ಇನ್ನೂ ಕೆಲವು ಪಾಯಿಂಟ್‌ಗಳಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳ ಇತ್ತ ಗಮನಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News