ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌... ಅದೇ ಸ್ಕೂಲ್‌ನ ವಿದ್ಯಾರ್ಥಿಯಿಂದಲೇ ಕೃತ್ಯ

school bomb threat case: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಡೆತನದ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಕಳುಹಿಸಿದ್ದ ಕಿಡಿಗೇಡಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. 

Written by - VISHWANATH HARIHARA | Edited by - Chetana Devarmani | Last Updated : Jul 19, 2022, 04:06 PM IST
  • ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌
  • ಅದೇ ಸ್ಕೂಲ್‌ನ ವಿದ್ಯಾರ್ಥಿಯಿಂದಲೇ ಕೃತ್ಯ
  • ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌... ಅದೇ ಸ್ಕೂಲ್‌ನ ವಿದ್ಯಾರ್ಥಿಯಿಂದಲೇ ಕೃತ್ಯ  title=
ಶಾಲೆಗೆ ಬಾಂಬ್ ಬೆದರಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಡೆತನದ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಕಳುಹಿಸಿದ್ದ ಕಿಡಿಗೇಡಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ತನಿಖೆಯಿಂದ ಎಲ್ಲರೂ ಆಶ್ಚರ್ಯಪಡುವ ಸಂಗತಿ ಬಯಲಾಗಿದೆ. ಅದೇ ಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿ ಬೆದರಿಕೆ ಮೇಲ್ ಕಳುಹಿಸಿದ್ದ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: Bomb threat: ಡಿಕೆ ಶಿವಕುಮಾರ್‌ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ.!

ನ್ಯಾಷನಲ್ ಹಿಲ್ ವ್ಯೂ ಪಬ್ಲಿಷ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದು, ಆತನನ್ನು ವಶಕ್ಕೆ ವಿಚಾರಣೆ ನಡೆಸಿ ಪೊಲೀಸರು ಬಾಲಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಜುಲೈ 21 ರಂದು 10 ನೇ ತರಗತಿಯ ಮೊದಲ ಸೆಮಿಸ್ಟರ್ ಪರೀಕ್ಷೆ ಇತ್ತು. ಹೀಗಾಗಿ ಪರೀಕ್ಷೆ ಮುಂದೂಡಲು ವಿದ್ಯಾರ್ಥಿ ಪ್ಲ್ಯಾನ್ ಮಾಡಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಆರ್. ಆರ್. ನಗರ ಪೊಲೀಸರು ಮೇಲ್ ಬಂದ ಐಪಿ ಅಡ್ರೆಸ್ ಜಾಡು ಹಿಡಿದು ವಿದ್ಯಾರ್ಥಿಯ ಕಿಡಿಗೇಡಿತನವನ್ನು ಪತ್ತೆ ಮಾಡಿದ್ದಾರೆ.

ಆರೋಪಿ ಅಪ್ರಾಪ್ತನಾಗಿರುವ ಕಾರಣ ಇ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಹಾಗೂ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ‌ ಲಕ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಖಾತೆ ತೆರೆದ ಆಮ್ ಆದ್ಮಿ ಪಕ್ಷ...!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News