Bike Accident: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಹುಟ್ಟುಹಬ್ಬದ ದಿನವೇ ಮಸನ ಸೇರಿದ ಯುವಕರು!

Bike Accident: ರಭಸದಿಂದ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದದ್ದೇ ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Written by - Zee Kannada News Desk | Last Updated : Dec 7, 2022, 12:45 PM IST
  • ಹುಟ್ಟು ಹಬ್ಬದ ಸಂಭ್ರಮದ ದಿನವೇ ಭೀಕರ ರಸ್ತೆ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವು
  • ಅತಿವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಸಿದ ಯುವಕರು
  • ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ತಾಂಡಾ ಸಮೀಪ 21 ವರ್ಷದ ಇಬ್ಬರು ಯುವಕರು ಸಾವು
Bike Accident: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಹುಟ್ಟುಹಬ್ಬದ ದಿನವೇ ಮಸನ ಸೇರಿದ ಯುವಕರು! title=
ಹುಟ್ಟುಹಬ್ಬದ ದಿನವೇ ಮಸನ ಸೇರಿದ ಯುವಕ!

ಬಾಗಲಕೋಟೆ: ಹುಟ್ಟುಹಬ್ಬದ ಸಂಭ್ರಮದ ದಿನವೇ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾರೆ.  

ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ತಾಂಡಾ ಸಮೀಪ ಈ ದುರ್ಘಟನೆ ನಡೆದಿದೆ. ಅತಿವೇಗದಲ್ಲಿ ಬೈಕ್ ಚಲಾಯಿಸಿಕೊಂಡು ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಸಿದ್ದಾರೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯುವಕನ ದೇಹ ತುಂಡಾಗಿದೆ.   

ಇದನ್ನೂ ಓದಿ: Kannada flag burnt Case: ಪೊಲೀಸರ ಮೇಲಿನ ಸೇಡು-ಮಿಡೀಯಾ ಕವರೇಜ್ ಗಾಗಿ ಕನ್ನಡ ಬಾವುಟ ಸುಟ್ಟಿದ್ದ ಟೆಕ್ಕಿ..!

ಸಂಗಮೇಶ (21) ಹಾಗೂ ಕಿರಣ (21) ಸಾವನ್ನಪ್ಪಿದ ಯುವಕರು. ಸಂಗಮೇಶನ ಹುಟ್ಟು ಹಬ್ಬದ ಹಿನ್ನೆಲೆ ಪಾರ್ಟಿಗಾಗಿ ಬೈಕ್‍ನಲ್ಲಿ ಯುವಕರು ತೆರಳಿದ್ದರು. ಹುಟ್ಟು ಹಬ್ಬದ ಪಾರ್ಟಿ ಮುಗಿಸಿ ಬರುವಾಗ ಈ ಘಟನೆ  ನಡೆದಿದೆ. 

ವಿದ್ಯುತ್ ಕಂಬಕ್ಕೆ ವೇಗವಾಗಿ ಬೈಕ್ ಡಿಕ್ಕಿಯಾದ ಪರಿಣಾಮ ನವನಗರದ ಸಂಗಮೇಶ ಮತ್ತು ಶಿರಗುಪ್ಪಿ ತಾಂಡಾದ ಕಿರಣ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸಂಗಮೇಶನ ದೇಹ ತುಂಡರಿಸಿದೆ. ಘಟನಾ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Nagaraj Watal : ರಾಜ್ಯಕ್ಕೆ ಬರುವ ಮಹಾರಾಷ್ಟ್ರ ಸಚಿವರನ್ನು ಬಂಧಿಸಿ : ವಾಟಾಳ್ ಆಗ್ರಹ 

ರಭಸದಿಂದ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದದ್ದೇ ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News